Fraud cases on the rise in Mandya district
ಮೈಸೂರು : ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಬ್ಯಾಂಕ್‌ನ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್‌ಗೆ 47,72ಲಕ್ಷ ರೂ. ಹಣವನ್ನು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ನಂಜನಗೂಡಿನ ನಿವಾಸಿ ಮಹದೇವ ಸ್ವಾಮಿ ಎಂಬಾತನೇ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ವಂಚಿಸಿರುವ ವ್ಯಕ್ತಿ. ಮಹದೇವ ಸ್ವಾಮಿ ಈ ಹಿಂದೆ ಇಂಡಸ್ ಬ್ಯಾಂಕ್‌ನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದನು. ಕಳೆದ ಮೇ ತಿಂಗಳಿನಿಂದ ಆತ ಕೆಲಸಕ್ಕೆ ಬಂದಿರಲಿಲ್ಲ. ಅವರ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿತ್ತು. ಹೀಗಾಗಿ ಅನುಮಾನಗೊಂಡ ಅವರು ಮಹದೇವಸ್ವಾಮಿ ಅವರು ಈ ಹಿಂದೆ ವಾಹನಗಳ ಸಾಲಗಳ ವಸೂಲಾತಿ ಮಾಡುತ್ತಿದ್ದವರ ಖಾತೆಗಳನ್ನು ಪರಿಶೀಲಿಸಿದ ವೇಳೆ ಹಲವು ಮಂದಿ ಸಾಲದ ಕಂತು ಕಟ್ಟಿಲ್ಲದಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ.
ಹೀಗಾಗಿ ಲೆಕ್ಕ ಪತ್ರಗಳನ್ನು ಪರಿಶೀಲಿಸಿದ ವೇಳೆ ಆತ ೪೭,೭೨,೮೧೦ ರೂ. ಹಣವನ್ನು ಗ್ರಾಹಕರಿಂದ ಸಂಗ್ರಹಿಸಿ ಬ್ಯಾಂಕ್‌ಗೆ ಪಾವತಿಸಿಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬ್ಯಾಂಕ್‌ನ ಅಧಿಕಾರಿಗಳು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:-ಕಾಫಿತೋಟದಲ್ಲಿ ಕಾಣೆಯಾಗಿದ್ದ 2 ವರ್ಷದ ಬಾಲಕಿ ; ಪತ್ತೆಹಚ್ಚಿದ ಶ್ವಾನ !
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…