ಮೈಸೂರು: ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ನನ್ನನ್ನು ನಿವೃತ್ತಿ ಆಗಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ಸಿಎಂ ಸಿದ್ದರಾಮಯ್ಯನವರೇ ನೀವೇ ಮನೆಗೆ ಹೋಗುವ ಪರಿಸ್ಥಿತಿ ಬಂದಿದೆ. ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ನಾವು ನಿದ್ದೆ ಮಾಡಲ್ಲ ಎಂದು ಕಿಡಿಕಾರಿದರು.
ಇನ್ನು ರಾಜ್ಯದಲ್ಲಿ ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಆದ್ರೂ ರಾಜ್ಯದಲ್ಲಿ ಒಂದಾದ್ರು ಕಾರ್ಯಕ್ರಮಗಳು ಆಗಿವೆಯಾ ಎಂದು ಪ್ರಶ್ನಿಸಿದರು.
ಇನ್ನು ಡಿ.ಕೆ.ಶಿವಕುಮಾರ್ ತಾವು ಕಲ್ಲುಬಂಡೆ ಎಂದು ಹೇಳಿಕೊಂಡು ಓಡಾಡುತ್ತಾರೆ. ಡಿಕೆಶಿ, ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಾ ಇದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಇಬ್ಬರೂ ಲೂಟಿಕೋರರು. ನಿಮ್ಮನ್ನು ರಾಜ್ಯದ ಜನತೆ ಶೀಘ್ರದಲ್ಲೇ ಮನೆಗೆ ಕಳುಹಿಸುತ್ತಾರೆ. ಈಗ ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರೋದು ನಿಶ್ಚಿತ ಎಂದರು.