ಮೈಸೂರು ನಗರ

ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು

ಮೈಸೂರು : ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ಬನ್ನಿಮಂಟಪದಲ್ಲಿನ ಹನುಮಂತನಗರ ನಿವಾಸಿ ಮೊಹಮ್ಮದ್ ನದೀಂ(೩೪) ಮೃತಪಟ್ಟವರು. ಇವರು ನ.೧೯ ರಂದು ರಾತ್ರಿ ೧೧ ಗಂಟೆ ವೇಳೆಯಲ್ಲಿ ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯ ಆಸ್ಪತ್ರೆ ಕಡೆಗೆ ಹೋಗುತ್ತಿದ್ದಾಗ ದೇವೇಗೌಡ ವೃತ್ತದ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ಪರಾರಿಯಾಗಿತ್ತು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೊಹಮ್ಮದ್ ನದೀಂ ಅವರನ್ನು ತಕ್ಷಣ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಕಾರಿನ ನೋಂದಣಿ ಸಂಖ್ಯೆಯನ್ನು ಸ್ಥಳೀಯರು ಗುರುತು ಹಾಕಿಕೊಂಡಿದ್ದು, ಇದರ ಆಧಾರದಲ್ಲಿ ಮೃತರ ಸಹೋದರ ಎನ್.ಆರ್.ಸಂಚಾರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ: ನಂಜನಗೂಡು| ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವು

ಆಟೋ ಪಲ್ಟಿ : ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಗಾಯ

ಮೈಸೂರು: ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡ ಆಟೋ ಪಲ್ಟಿಯಾಗಿದ್ದರಿಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಎನ್.ಆರ್.ಮೊಹಲ್ಲಾದಲ್ಲಿ ಸಂಭವಿಸಿದೆ.

ಮೊದಲನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ, ನ.೧೯ರಂದು ಬೆಳಿಗ್ಗೆ ೭.೩೦ರ ವೇಳೆಯಲ್ಲಿ ರಾಜೇಂದ್ರ ನಗರದ ಮನೆಯಿಂದ ಕಾಲೇಜಿಗೆ ಆಟೋದಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯಿಂದಾಗಿ ಆಟೋ, ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಭುಜದ ಮೂಳೆ ಮುರಿದಿರುವುದರಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ತಂದೆ ನೀಡಿದ ದೂರಿನ ಅನ್ವಯ ಎನ್. ಆರ್.ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

10 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

10 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

12 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

14 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

17 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

17 hours ago