ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್‌ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ.
ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.
ಕೆಲವು ಗ್ರಾಹಕರು, ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವವರ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ ನಿರ್ಧರಿಸಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಮೀಟರ್/ಮಾಪಕಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್ ಪಾವತಿಗೆ ಅಂತಿಮ ಗಡುವಾಗಿರುತ್ತದೆ.”
“ಗ್ರಾಹಕರಿಗೆ ನೀಡುವ ಮಾಸಿಕ ಬಿಲ್‌ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಈ ಬಿಲ್ ಅನ್ನೇ ವಿದ್ಯುತ್ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ” ಎಂದು ತಿಳಿಸಲಾಗಿರುತ್ತದೆ.
ಇದನ್ನೂ ಓದಿ:-ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಖಂಡ್ರೆ
ಈ ಹಿನ್ನೆಲೆಯಲ್ಲಿ ನವೆಂಬರ್ 14, 2025ರಂದು ಕಂದಾಯ ವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕ ಬಾಕಿಯನ್ನು ನವೆಂಬರ್ 14, 2025 ರೊಳಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧಿಕೃತ ನಗದು ಕೌಂಟರ್ ಅಥವಾ ಆನ್ ಲೈನ್ ಮೂಲಕ ಪಾವತಿಸುವಂತೆ ಕೋರಲಾಗಿದೆ.
ನಿಗದಿತ ದಿನಾಂಕದೊಳಗೆ ವಿದ್ಯುತ್ ಶುಲ್ಕ ಬಾಕಿ ಪಾವತಿಸದ ಮೀಟರ್/ಮಾಪಕಗಳಿಗೆ ನವೆಂಬರ್ 14, 2025ರ ನಂತರ ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ಕಡಿತಗೊಳಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ಗ್ರಾಹಕರು ಈ ಕ್ರಮಕ್ಕೆ ಆಸ್ಪದ ನೀಡದೆ ತಮ್ಮ ವಿದ್ಯುತ್ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕದ ಬಾಕಿಯನ್ನು ತುರ್ತಾಗಿ ಪಾವತಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
“ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್/ಮಾಪಕಗಳಿಗೆ (ತುರ್ತು ಸೇವೆಗಳನ್ನು ಹೊರತುಪಡಿಸಿ,) ನಿಯಮಾನುಸಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ತುರ್ತಾಗಿ ತಮ್ಮ ವಿದ್ಯುತ್ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
ಕೆ.ಎಂ. ಮುನಿಗೋಪಾಲ್ ರಾಜು,”
ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…