Mysore
28
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರಕರಣವೊಂದರ ಆರೋಪಿ ಸೆರೆ

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ ಮೊ.ಸಂ 71/2025 ಕಲಂ: 331(4), 305 ಬಿ.ಎನ್.ಎಸ್ ಪ್ರಕರಣದಲ್ಲಿ ಆರೋಪಿ ಅರುಣ್ ಕುಮಾರ್ ಎಂಬಾತನನ್ನು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಲಕ್ಷ ಮೌಲ್ಯದ ಮಹೇಂದ್ರ ಥಾರ್ ವಾಹನವನ್ನು ಅಮಾನತ್ತುಪಡಿಸಿಕೊಂಡು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ.

ಸದರಿ ಕಾರ್ಯಾಚರಣೆಯಲ್ಲಿ ಸಿಸಿಬಿಯ ಪೊಲೀಸ್ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ, ಪಿ.ಎಸ್.ಐ ಅನಿಲ್‌ಕುಮಾರ್.ಎನ್, ಎ.ಎಸ್.ಐ ಸುರೇಶ್.ಆರ್ ಹಾಗೂ ಸಿಬ್ಬಂದಿಗಳಾದ ಜಗದೀಶ್,  ಪ್ರಕಾಶ್.ಟಿ,  ಜಯರಾಮ್, ರಾಘವೇಂದ್ರ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಸದರಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿ ಪ್ರಶಂಶಿಸಿದ್ದಾರೆ.

 

Tags:
error: Content is protected !!