ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡಬೇಕೆಂಬ ಹಾಗೂ ಆ ರಸ್ತೆಗೆ ಪ್ರಿನ್ಸೆಸ್ ರಸ್ತೆಯೆಂದು ಹೆಸರಿಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಈ ಬಗ್ಗೆ ಕಡತಗಳನ್ನು ಪರಿಶೀಲನೆ ಮಾಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಶಾದ್ ಉರ್ ರೆಹಮಾನ್ ಷರೀಫ್ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು(ಡಿಸೆಂಬರ್.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಇಡದ ಅವರು, ಪಾಲಿಕೆ ವತಿಯಿಂದ 1999 ರಿಂದ 2024ರವರೆಗಿನ ಎಲ್ಲಾ ಕಡತಗಳನ್ನು ಪರಿಶೀಲಿಸಲಾಗಿದೆ. ಆ ಕಡತಗಳಲ್ಲಿ ಕೆಆರ್‌ಎಸ್ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂಬ ಹೆಸರಿತ್ತೆಂದು ಎಲ್ಲಿಯೂ ಕಂಡು ಬಂದಿಲ್ಲ, ಆ ರಸ್ತೆಗೆ ಯಾವ ಹೆಸರಿಲ್ಲ. ಈಗ ನಾವು 1964 ರಿಂದ 1999 ವರೆಗಿನ ಕಡತಗಳನ್ನು ಪರಿಶಿಲನೆ ಮಾಡುತ್ತಿದ್ದೇವೆ. ಅದು ಕೂಡ ಬಹುತೇಕ ಮುಕ್ತಾಯವಾಗಿದೆ. ಅಲ್ಲದೇ ಇನ್ನೂ 20 ವರ್ಷಗಳ ಕಡತಗಳ ಪರಿಶೀಲನೆ ಮಾತ್ರ ಬಾಕಿ ಇದೆ ಎಂದು ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ವತಿಯಿಂದ ಈಗ ಪರಿಶಿಲನೆ ಮಾಡಿರುವ ಕಡತಗಳಲ್ಲಿ ಎಲ್ಲಿಯೂ ಸಹ ಪ್ರಿನ್ಸೆಸ್ ಹೆಸರಿನ ಬಗ್ಗೆ ಉಲ್ಲೇಖವಿಲ್ಲ. ನಾವು ಮೈಸೂರು ಮಹಾನಗರ ಪಾಲಿಕೆ 9 ವಲಯಗಳ ಆಯುಕ್ತರಿಂದ ಮಾಹಿತಿ ಪಡೆದಿದ್ದೇನೆ. ಅವರು ಸಹ ಕೆಆರ್‌ಎಸ್ ರಸ್ತೆಗೆ ಪ್ರಿನ್ಸೆಸ್ ಹೆಸರಿದೆ ಎಂಬುದಕ್ಕೆ ಯಾವ ಅಧಿಕೃತ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.
ನಮ್ಮ ವ್ಯಾಪ್ತಿಯ ದಾಖಲೆ ಪರಿಶೀಲನೆ ಬಹುತೇಕ ಮುಕ್ತಾಯವಾಗಿದ್ದು, ಗೆಜೆಟಿಯರಿನಲ್ಲಿ ಆ ಹೆಸರು ಇದಿಯೋ ಅಥವಾ ಇಲ್ಲವೋ ಎಂಬ ಬಗ್ಗೆ ನನಗೆ ಮಾಹಿತಿ ದೊರೆತಿಲ್ಲ. ಅಲ್ಲದೇ ಆ ದಾಖಲೆ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಪಾಲಿಕೆಯ ಕೌನ್ಸಿಲ್ ವ್ಯಾಪ್ತಿಯಲ್ಲು ಪ್ರಿನ್ಸೆಸ್ ರಸ್ತೆ ಹೆಸರಂತೂ ಕಂಡು ಬಂದಿಲ್ಲ ಎಂದು ಸ್ಟಷ್ಟನೆ ನೀಡಿದ್ದಾರೆ.




