ಮೈಸೂರು ನಗರ

ಕೆಆರ್‌ಎಸ್ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ಎಲ್ಲೂ ಹೆಸರಿಲ್ಲ: ಪಾಲಿಕೆ ಆಯುಕ್ತ ಅಶಾದ್‌ ಸ್ಪಷ್ಟನೆ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡಬೇಕೆಂಬ ಹಾಗೂ ಆ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ಹೆಸರಿಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಈ ಬಗ್ಗೆ ಕಡತಗಳನ್ನು ಪರಿಶೀಲನೆ ಮಾಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಶಾದ್‌ ಉರ್‌ ರೆಹಮಾನ್‌ ಷರೀಫ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಇಡದ ಅವರು, ಪಾಲಿಕೆ ವತಿಯಿಂದ 1999 ರಿಂದ 2024ರವರೆಗಿನ ಎಲ್ಲಾ ಕಡತಗಳನ್ನು ಪರಿಶೀಲಿಸಲಾಗಿದೆ. ಆ ಕಡತಗಳಲ್ಲಿ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂಬ ಹೆಸರಿತ್ತೆಂದು ಎಲ್ಲಿಯೂ ಕಂಡು ಬಂದಿಲ್ಲ, ಆ ರಸ್ತೆಗೆ ಯಾವ ಹೆಸರಿಲ್ಲ. ಈಗ ನಾವು 1964 ರಿಂದ 1999 ವರೆಗಿನ ಕಡತಗಳನ್ನು ಪರಿಶಿಲನೆ ಮಾಡುತ್ತಿದ್ದೇವೆ. ಅದು ಕೂಡ ಬಹುತೇಕ ಮುಕ್ತಾಯವಾಗಿದೆ. ಅಲ್ಲದೇ ಇನ್ನೂ 20 ವರ್ಷಗಳ ಕಡತಗಳ ಪರಿಶೀಲನೆ ಮಾತ್ರ ಬಾಕಿ ಇದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ವತಿಯಿಂದ ಈಗ ಪರಿಶಿಲನೆ ಮಾಡಿರುವ ಕಡತಗಳಲ್ಲಿ ಎಲ್ಲಿಯೂ ಸಹ ಪ್ರಿನ್ಸೆಸ್‌ ಹೆಸರಿನ ಬಗ್ಗೆ ಉಲ್ಲೇಖವಿಲ್ಲ. ನಾವು ಮೈಸೂರು ಮಹಾನಗರ ಪಾಲಿಕೆ 9 ವಲಯಗಳ ಆಯುಕ್ತರಿಂದ ಮಾಹಿತಿ ಪಡೆದಿದ್ದೇನೆ. ಅವರು ಸಹ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ಹೆಸರಿದೆ ಎಂಬುದಕ್ಕೆ ಯಾವ ಅಧಿಕೃತ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.

ನಮ್ಮ ವ್ಯಾಪ್ತಿಯ ದಾಖಲೆ ಪರಿಶೀಲನೆ ಬಹುತೇಕ ಮುಕ್ತಾಯವಾಗಿದ್ದು, ಗೆಜೆಟಿಯರಿನಲ್ಲಿ ಆ ಹೆಸರು ಇದಿಯೋ ಅಥವಾ ಇಲ್ಲವೋ ಎಂಬ ಬಗ್ಗೆ ನನಗೆ ಮಾಹಿತಿ ದೊರೆತಿಲ್ಲ. ಅಲ್ಲದೇ ಆ ದಾಖಲೆ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಪಾಲಿಕೆಯ ಕೌನ್ಸಿಲ್‌ ವ್ಯಾಪ್ತಿಯಲ್ಲು ಪ್ರಿನ್ಸೆಸ್‌ ರಸ್ತೆ ಹೆಸರಂತೂ ಕಂಡು ಬಂದಿಲ್ಲ ಎಂದು ಸ್ಟಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago