Mysore
23
haze

Social Media

ಮಂಗಳವಾರ, 06 ಜನವರಿ 2026
Light
Dark

ಮೈಸೂರು ನಗರ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಜಿಲ್ಲಾ ಘಟಕದ ಉದ್ಘಾಟನೆ

ಮೈಸೂರು: ಮೈಸೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಮತ್ತು ಇಲಾಖೆಗಳಲ್ಲಿ ಸರ್ಕಾರದ ಸುತ್ತೋಲೆ ಹಾಗೂ ಆದೇಶದಂತೆ ಕರ್ತವ್ಯ ನಿರ್ವಹಿಸದ ಬಗ್ಗೆ ಹಾಗೂ ಲಂಚದ ಬೇಡಿಕೆ ಬಗ್ಗೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ಈ ಬಗ್ಗೆ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಸದಸ್ಯರುಗಳು, ಮೈಸೂರು ಜಿಲ್ಲೆಗೆ ಬರುವ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಇಲಾಖೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೇ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ.

ಪಾರದರ್ಶಕ ಆಡಳಿತಕ್ಕಾಗಿ ಭ್ರಷ್ಟಾಚಾರ ತೊಡೆದು ಹಾಕಲು ಕಾನೂನಿನ ನಿಯಮದಂತೆ ಅಧಿಕಾರಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು. ಈ ಉದ್ದೇಶಕ್ಕಾಗಿಯೇ ಮೈಸೂರು ಜಿಲ್ಲಾ ಘಟಕ ಸ್ಥಾಪಿಸಲಾಗಿದೆ.

ಮುಖ್ಯವಾಗಿ ಪ್ರತಿಯೊಂದು ಇಲಾಖೆಯ ವೈಫಲ್ಯಗಳನ್ನು ಸರಿಪಡಿಸಲು ಭ್ರಷ್ಟಾಚಾರದ ಬ್ರಹ್ಮಾಂಡ ಹಸ್ತ್ರವನ್ನಾಗಿ ಈ ವೇದಿಕೆಯನ್ನು ಉದ್ಘಾಟಿಸಲಾಗಿದೆ ಎಂದು ತಿಳಿಸಿದರು.

Tags:
error: Content is protected !!