Mysore City Police
ಮೈಸೂರು: ಕಳೆದ ಎರಡು ತಿಂಗಳಿನಲ್ಲಿ ಮೈಸೂರು ನಗರ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಒಟ್ಟು 42 ಸ್ವತ್ತು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, ಒಟ್ಟು 42 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ 63 ಲಕ್ಷ ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 19 ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರು ವಶಪಡಿಸಿಕೊಂಡಿರುವ ಒಟ್ಟು 63 ಲಕ್ಷ ಮೌಲ್ಯದ ಸ್ವತ್ತುಗಳಲ್ಲಿ 659 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 27 ದ್ವಿಚಕ್ರ ವಾಹನಗಳು, 1 ಕಾರು, 2,57,000 ನಗದು, ಮತ್ತು 1 ಲ್ಯಾಪ್ ಟಾಪ್ ಸೇರಿವೆ ಎಂದು ಮಾಹಿತಿ ನೀಡಿದರು.
8 ಸರಗಳ್ಳತನ ಪ್ರಕರಣಗಳು, 2 ಮನೆಗಳ್ಳತನ ಪ್ರಕರಣಗಳು, 1 ಮನೆ ಕೆಲಸದವರಿಂದ ಕಳ್ಳತನ ಪ್ರಕರಣ, 28 ವಾಹನ ಕಳ್ಳತನ ಪ್ರಕರಣಗಳು, 3 ಸಾಮಾನ್ಯ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.
ಇನ್ನು ಪೊಲೀಸರು ಮಾದಕ ವಸ್ತುಗಳ ವಿರುದ್ಧವೂ ಕಾರ್ಯಾಚರಣೆ ನಡೆಸಿದ್ದು, 11 ಎನ್‌ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ 65 ಕೆಜಿ 800 ಗ್ರಾಂ ಗಾಂಜಾ ಹಾಗೂ 23 ಗ್ರಾಂ ಎಂಡಿಎಂಎ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…