ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ ಇನ್ನಿತರೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಬುಧವಾರ ಬೆಳಿಗ್ಗೆ ನಗರದ ಪುರಭವನದ ಆವರಣದಲ್ಲಿ ಶೌಚಾಲಯ ಬಳಕೆ ಕುರಿತು ಏರ್ಪಡಿಸಲಾಗಿದ್ದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಜಾಗೃತಿ ಜಾಥಾಗೆ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಚಾಲನೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸಬೇಡಿ, ಮನೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂಬಿತ್ಯಾದಿ ಫಲಕಗಳನ್ನು ಹಿಡಿದ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.
ಇದೇ ವೇಳೆ ಶೌಚಾಲಯಗಳನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳಬೇಕು? ಸಾರ್ವಜನಿಕ ಶೌಚಾಲಯಗಳನ್ನು ಹೇಗೆ ಬಳಸಬೇಕು? ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸಿದಲ್ಲಿ ಆಗುವ ತೊಂದರೆಗಳೇನು? ಎಂಬುದನ್ನು ಕುರಿತು ಗಾಂಧಿ ವೃತ್ತದಲ್ಲಿ ಬೀದಿ ನಾಟಕ ಪ್ರದರ್ಶಿಸಲಾಯಿತು.
ಇದಕ್ಕೂ ಮುನ್ನ ಪುರಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಸಾರ್ವಜನಿಕ ಶೌಚಾಲಯಗಳಲ್ಲಿ ನೈರ್ಮಲ್ಯತೆ ಕಾಪಾಡಬೇಕು. ಇಲ್ಲದಿದ್ದರೆ ಸಾಂಕ್ರಾಮಿಕ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಸಾರ್ವಜನಿಕರು ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
2016ರಲ್ಲಿ ದೇಶದ ಸ್ವಚ್ಛ ನಗರಗಳ ಪೈಕಿ ಮೈಸೂರು ಪ್ರಥಮ ಸ್ಥಾನ ಗಳಿಸಿತ್ತು. ಕಳೆದ ಬಾರಿ 3 ನೇ ಸ್ಥಾನ ಬಂದಿದೆ. ಜನರು ಸ್ವಚ್ಛತೆಯ ಬಗ್ಗೆ ನಗರಪಾಲಿಕೆಯೊಂದಿಗೆ ಕೈಜೋಡಿಸಿದರೆ ಈ ಬಾರಿ ಮೈಸೂರು ಸ್ವಚ್ಛತೆಯಲ್ಲಿ ಮತ್ತೆ ನಂ.1 ಸ್ಥಾನ ಪಡೆಯಬಹುದು ಎಂದರು.
ನಂತರ ನಗರಪಾಲಿಕೆಯಲ್ಲಿ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುವವರಿಗೆ ಹಾಗೂ ಶೌಚಾಲಯ ನಿರ್ವಹಣೆ ಮಾಡುವ ಸಿಬ್ಬಂದಿಗೆ ಆಯುಕ್ತರು ಸ್ವಚ್ಛತಾ ಕಿಟ್ ಹಾಗೂ ಸೇಫ್ಟಿ ಕಿಟ್‌ಗಳನ್ನು ವಿತರಣೆ ಮಾಡಿದರು. ಪಾಲಿಕೆ ಅಧಿಕ್ಷಕ ಅಭಿಯಂತರ ಮಂಜು, ಎಇಇ ಶಿಲ್ಪಾ, ಅಶ್ವಿನ್, ಧನುಷ್, ಅಧಿಕಾರಿಗಳಾದ ನಾಗರಾಜೇಗೌಡ, ಮುಸ್ತಾಫಾ, ರವಿಕುಮಾರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…