ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಪತ್ರಗಳನ್ನು ಪಡೆದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಬಳಿಕ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಹಾರ ಸವಿದರು. ಈ ವೇಳೆ ಸಚಿವರಾದ ವೆಂಕಟೇಶ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಶಾಸಕರುಗಳು ಉಪಸ್ಥಿತರಿದ್ದರು.





