Mysore
24
haze

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್‌ ಸಂಪರ್ಕ: ಕಾರಣ ಇಷ್ಟೇ

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ.

ಕುವೆಂಪುನಗರದಲ್ಲಿ 80×120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾಗಿದೆ.

ಆದರೆ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ ಕಡ್ಡಾಯ ಮಾಡಿರುವ ಕಾರಣ ವಿದ್ಯುತ್‌ ಸಂಪರ್ಕ ನೀಡಲು ಸಾಧ್ಯವಾಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನು ಓದಿ: ವಿಶ್ವಸಂಸ್ಥೆ ಹವಾಮಾನ ಶೃಂಗಸಭೆಯಲ್ಲಿ ಬೆಂಕಿ: 21 ಜನರಿಗೆ ಗಂಭೀರ ಗಾಯ

ಇನ್ನು ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೇ ಈಗಾಗಲೇ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳಿಗೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಷರತ್ತು ವಿಧಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆ ಒಲವು ತೋರಿದೆ.

ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ನಕ್ಷೆ ಅನುಮೋದನೆ ಹಾಗೂ ಓಸಿ ಕಡ್ಡಾಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆಗೂ ಬಿಸಿ ತಟ್ಟಿದೆ. ಮುಖ್ಯಮಂತ್ರಿಗಳ ಕಥೆಯೇ ಹೀಗಾದ್ರೆ, ಹೊಸದಾಗಿ ಮನೆ ಕಟ್ಟುತ್ತಿರುವ ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆ ಮೂಡಿದೆ.

Tags:
error: Content is protected !!