ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ.
ಕುವೆಂಪುನಗರದಲ್ಲಿ 80×120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 ಕಿಲೋ ವ್ಯಾಟ್ ವಿದ್ಯುತ್ ಮಂಜೂರಾಗಿದೆ.
ಆದರೆ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ ಕಡ್ಡಾಯ ಮಾಡಿರುವ ಕಾರಣ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಾಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
ಇದನ್ನು ಓದಿ: ವಿಶ್ವಸಂಸ್ಥೆ ಹವಾಮಾನ ಶೃಂಗಸಭೆಯಲ್ಲಿ ಬೆಂಕಿ: 21 ಜನರಿಗೆ ಗಂಭೀರ ಗಾಯ
ಇನ್ನು ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೇ ಈಗಾಗಲೇ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳಿಗೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಷರತ್ತು ವಿಧಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆ ಒಲವು ತೋರಿದೆ.
ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ನಕ್ಷೆ ಅನುಮೋದನೆ ಹಾಗೂ ಓಸಿ ಕಡ್ಡಾಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆಗೂ ಬಿಸಿ ತಟ್ಟಿದೆ. ಮುಖ್ಯಮಂತ್ರಿಗಳ ಕಥೆಯೇ ಹೀಗಾದ್ರೆ, ಹೊಸದಾಗಿ ಮನೆ ಕಟ್ಟುತ್ತಿರುವ ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆ ಮೂಡಿದೆ.
ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಡಿಎಂಕೆ…
ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೋನಿಯಾ…
ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು…
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ದಾಖಲೆ ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು ಅವರ ದಾಖಲೆಗೂ ಸಮಾನವಾಗಿ ಸುದೀರ್ಘ…
ಮೈಸೂರು: ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಎಲ್ಲೆಡೆ ಆತಂಕ ಮೂಡಿಸಿದೆ. ಬಾಂಬ್…