ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ.
ಕುವೆಂಪುನಗರದಲ್ಲಿ 80×120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 ಕಿಲೋ ವ್ಯಾಟ್ ವಿದ್ಯುತ್ ಮಂಜೂರಾಗಿದೆ.
ಆದರೆ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ ಕಡ್ಡಾಯ ಮಾಡಿರುವ ಕಾರಣ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಾಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
ಇದನ್ನು ಓದಿ: ವಿಶ್ವಸಂಸ್ಥೆ ಹವಾಮಾನ ಶೃಂಗಸಭೆಯಲ್ಲಿ ಬೆಂಕಿ: 21 ಜನರಿಗೆ ಗಂಭೀರ ಗಾಯ
ಇನ್ನು ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೇ ಈಗಾಗಲೇ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳಿಗೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಷರತ್ತು ವಿಧಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆ ಒಲವು ತೋರಿದೆ.
ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ನಕ್ಷೆ ಅನುಮೋದನೆ ಹಾಗೂ ಓಸಿ ಕಡ್ಡಾಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆಗೂ ಬಿಸಿ ತಟ್ಟಿದೆ. ಮುಖ್ಯಮಂತ್ರಿಗಳ ಕಥೆಯೇ ಹೀಗಾದ್ರೆ, ಹೊಸದಾಗಿ ಮನೆ ಕಟ್ಟುತ್ತಿರುವ ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆ ಮೂಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…