ಮೈಸೂರು : ನಗರದ ವಿವಿಧ ಸಂಘಟನೆಗಳು, ಶಾಲಾ-ಕಾಲೇಜುಗಳಲ್ಲಿ, ರಾಜಕೀಯ ಪಕ್ಷಗಳ ವತಿಯಿಂದ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಂವಿಧಾನ ಪೀಠಿಕೆಗಳನ್ನು ಓದುವ ಮೂಲಕ ಹಬ್ಬದ ವಾತಾವರಣದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ಕೆಲವು ಶಾಲಾ-ಕಾಲೇಜು, ಮೈಸೂರು ವಿವಿ, ಕರಾಮುವಿವಿಯಲ್ಲಿ ವಿಚಾರ ಸಂಕಿರಣಗಳು ನಡೆದವು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ವಿಶ್ವವಿದ್ಯಾನಿಲಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಬೆಂಗಳೂರಿನ ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಮಾತನಾಡಿ, ಸಂವಿಧಾನ ವಿರೋಧಿ ಮನಸ್ಸುಗಳು ದೇಶಕ್ಕೆ ಮಾರಕ. ಧರ್ಮ ಮತ್ತು ಜಾತಿರಹಿತವಾದ ‘ಭಾರತೀಯ’ ಎಂಬ ಭಾವನೆ ಇದ್ದರಷ್ಟೇ ದೇಶ ಉಳಿಯಲಿದೆ ಎಂದು ಹೇಳಿದರು.
ಇದನ್ನು ಓದಿ: ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿ
ಸಂವಿಧಾನದ ಆಶಯ ಪೂರ್ಣಗೊಂಡಿದೆಯೇ, ಬಾಬಾ ಸಾಹೇಬರ ಆಸೆ ಈಡೇರಿದೆಯೇ, ವಿದ್ಯಾವಂತರಲ್ಲಿ ಜಾಗೃತಿ ಮೂಡಿದೆಯೇ ಎಂಬ ವಿಚಾರಗಳ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಿದೆ. ನಮ್ಮೆಲ್ಲರ ಭವಿಷ್ಯ ಎನಿಸಿದ ಸಂವಿಧಾನವನ್ನು ನಾವು ಯೋಧರಂತೆ ರಕ್ಷಿಸಬೇಕು ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಮಾನತೆ ಆಶಯಕ್ಕೆ ತಳಪಾಯ ಹಾಕಿಕೊಟ್ಟು ಇಡೀ ರಾಷ್ಟ್ರಕ್ಕೆ ಮಾದರಿಯಾದರು. ಅಂಬೇಡ್ಕರ್ ಜಗತ್ತಿನ ಜ್ಞಾನವನ್ನು ಸಂಪಾದಿಸಿ ಉತ್ಕೃಷ್ಟವಾದ ಸಂವಿಧಾನವನ್ನು ಭಾರತಕ್ಕೆ ಕೊಟ್ಟರು. ಸತತ ೧೭ ದಿನಗಳ ಕಾಲ ಸಂವಿಧಾನದ ಪ್ರತಿ ವಿಽಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಇಷ್ಟಾದರೂ ಇವತ್ತಿಗೂ ಸಮಾನತೆ ಬಂದಿಲ್ಲ. ಅಂಬೇಡ್ಕರ್ ಅವರು ಮಹಿಳೆಯರ ಸುರಕ್ಷತೆಗಾಗಿ ಕಾನೂನು ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟರು. ಆದರೆ, ಹೆಣ್ಣು ಮಕ್ಕಳಿಗೆ ಇಂದಿಗೂ ರಕ್ಷಣೆ ಇಲ್ಲ. ಹೆಣ್ಣು ಮಗು ಹುಟ್ಟಿತು ಎಂದು ತಾಯಿಯೇ ಹತ್ಯೆ ಮಾಡಿದ್ದಾಳೆ. ಇಂಥ ವ್ಯವಸ್ಥೆಯಲ್ಲಿ ನಮ್ಮ ಜವಾಬ್ದಾರಿಗಳೇನು ಎಂಬುದನ್ನು ಅರಿತುಕೊಳ್ಳಬೇಕು ಎಂದರು.
ಎಲ್ಲ ಇಲಾಖೆಗಳಲ್ಲೂ ಜಡತ್ವ ಆವರಿಸಿದೆ. ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಮೀಸಲು ಹುದ್ದೆಗಳನ್ನು ಭರ್ತಿ ಮಾಡದೇ ವಂಚಿಸಲಾಗುತ್ತಿದೆ. ಸಮಾನ ಆರ್ಥಿಕತೆ, ಸಮಾನ ಭೂಮಿ ಹಂಚಿಕೆ ಸಾಧ್ಯವಾಗಿಲ್ಲ. ಆದರೆ, ಜಾತಿ, ಧರ್ಮದ ಹೆಸರಿನಲ್ಲಿ ರಾಷ್ಟ್ರವನ್ನು ವಿಘಟಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಪ್ರೊ.ಕೃಷ್ಣರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕುಲಸಚಿವ ಪ್ರೊ.ಎಸ್.ಕೆ.ನವೀನ್‌ಕುಮಾರ್, ಶೈಕ್ಷಣಿಕ ಡೀನ್ ಪ್ರೊ.ರಾಮನಾಥಂ ನಾಯ್ಡು, ಪರೀಕ್ಷಾಂಗ ಕುಲಸಚಿವ ಡಾ.ಆನಂದಕುಮಾರ್, ಹಣಕಾಸು ಅಽಕಾರಿ ಪ್ರೊ.ನಿರಂಜನ, ಅಧ್ಯಯನ ಕೇಂದ್ರದ ಡೀನ್ ಡಾ.ಚಂದ್ರೇಗೌಡ ಮುಂತಾದವರು ಉಪಸ್ಥಿತರಿದ್ದರು. ಡಾ.ಶಿವಕುಮಾರಸ್ವಾಮಿ ಸ್ವಾಗತಿಸಿದರು. ಡಾ.ರಮ್ಯಾ ನಿರೂಪಿಸಿದರು. ಶೇಷಣ್ಣ ಮತ್ತು ತಂಡದವರು ನಾಡಗೀತೆ ಹಾಡಿದರು.
ಇದನ್ನು ಓದಿ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ
ಸೆಸ್ಕ್‌ನಲ್ಲಿ ಸಂವಿಧಾನ ದಿನಾಚರಣೆ
ವಿಜಯನಗರ ೨ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಭಾರತದ ಸಂವಿಧಾನ ಪೀಠಿಕೆಯ ಬೋಧನೆ ಹಾಗೂ ಪ್ರತಿಜ್ಞಾವಿಽ ಸ್ವೀಕರಿಸಿ ಸಂವಿಧಾನ ದಿನ ಆಚರಿಸಲಾಯಿತು.
ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್ ರಾಜು ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿಗಮದ ಅಽಕಾರಿಗಳು ಹಾಗೂ ಸಿಬ್ಬಂದಿ, ಭಾರತದ ಸಂವಿಧಾನದ ಪ್ರಸ್ತಾವನೆ ಹೊಂದಿದ್ದ ಪ್ರತಿಗೆ ಪುಷ್ಪನಮನ ಸಲ್ಲಿಸಿದರು. ಇದಕ್ಕೂ ಮುನ್ನ ಭಾರತದ ಸಂವಿಧಾನ ಪೀಠಿಕೆ ಬೋಧಿಸಿ, ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಇದೇ ಸಂದರ್ಭದಲ್ಲಿ ಅಕಾಲಿಕ ಮರಣ ಹೊಂದಿದ ಐಎಎಸ್ ಅಽಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಸೆಸ್ಕ್‌ನ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೌನಾಚರಣೆ ಮೂಲಕ ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕ(ತಾಂತ್ರಿಕ)ರಾದ ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಽಕಾರಿ ಜಿ. ರೇಣುಕಾ, ಆಂತರಿಕ ಲೆಕ್ಕ ಪರಿಶೋಧನೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರಾದ ಎಲ್.ಲೋಕೇಶ್, ರಾಮಸ್ವಾಮಿ, ಸೇರಿದಂತೆ ನಿಗಮದ ಕಚೇರಿ ಅಽಕಾರಿಗಳು ಹಾಗೂ ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. (ಸೆಸ್ಕಾಂ)
ಸಂವಿಧಾನ ಸಂರಕ್ಷಣಾ ಸಮಿತಿ
ನಗರದ ಪುರಭವನದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಮಾಲಾರ್ಪಣೆ ಮಾಡಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಸಮಿತಿಯ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ಮಾತನಾಡಿ, ಬಾಬಾ ಸಾಹೇಬ್‌ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನದ ಆಶಯಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯತಾವತ್ತಾಗಿ ಜಾರಿಗೆ ತರಬೇಕು ಎಂದು ಹೇಳಿದರು.
ಪ್ರಸ್ತುತ ಸಂವಿಧಾನವನ್ನು ದುರ್ಬಲಗೊಳಿಸುವ ಮತ್ತು ಬದಲಿಸುವ ವಿನಾಶಕಾರಿಯಾದ ಮಾತುಗಳನ್ನು ಕೇಳುತ್ತಿದ್ದೇವೆ. ದೇಶದ ೧೪೦ ಕೋಟಿ ಜನರಿಗೆ ಸಮಾನವಾದ ಹಕ್ಕು ಮತ್ತು ಸಮಾನತೆಯ ಅವಕಾಶ ನೀಡಿರುವ ಸಂವಿಧಾನವನ್ನು ಸಂರಕ್ಷಿಸಬೇಕಿದೆ ಎಂದು ತಿಳಿಸಿದರು.
೨೦೧೫ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂವಿಧಾನ ದಿನಾಚರಣೆಗೆ ಚಾಲನೆ ಕೊಟ್ಟರು. ಇವತ್ತು ದೇಶಾದ್ಯಂತ ಸಂವಿಧಾನ ದಿನವನ್ನು ಆಚರಿಸಿ, ಸಂವಿಧಾನದ ಮಹತ್ವವನ್ನು ಸಾರಲಾಗುತ್ತಿದೆ. ಇದು ಸ್ವಾಗತಾರ್ಹ. ಕರ್ನಾಟಕ ಸರ್ಕಾರ ಸಂವಿಧಾನ ಪೀಠಿಕೆಯನ್ನು ಶಾಲೆಗಳಲ್ಲಿ ನಿತ್ಯ ಓದುವ ಮುಖೇನ ಮಕ್ಕಳಲ್ಲಿ ಸಂವಿಧಾನ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಎಡಿಜಿಪಿ ತಿಮ್ಮಯ್ಯ, ಮೈಸೂರು ವಕೀಲರ ಸಂಘದ ಉಪಾಧ್ಯಕ್ಷ ಎಂ.ವಿ.ಚಂದ್ರಶೇಖರ್, ನಾಯಕರ ಸಂಘದ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ನಗರಾಧ್ಯಕ್ಷ ಜೆ. ಪ್ರಭು, ವಕೀಲರಾದ ಎಸ್.ಪಿ. ಮಹೇಶ್, ಪುಟ್ಟಸಿದ್ದೇಗೌಡ, ಮುದ್ದು ಮಹದೇವಯ್ಯ, ಬಸವರಾಜು, ಎಚ್.ಮಹೇಶ, ಸೀನಾ, ಮುಖಂಡರಾದ ಶ್ರೀಧರ್, ರಾಜು ಮಾರ್ಕೆಟ, ಗಣೇಶ, ರವಿ, ರಘು, ಸುಬ್ರಹ್ಮಣ್ಯ,ಮತ್ತಿತರರು ಭಾಗವಹಿಸಿದ್ದರು.





