ಮೈಸೂರು ನಗರ

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಕಿರು ಸ್ತಬ್ಧಚಿತ್ರ ತಯಾರಿಸುವ ಸ್ಪರ್ಧೆಗೆ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಈ ಬಾರಿ ಅದ್ಧೂರಿಯಾಗಿ ದಸರಾ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಈ ಮಧ್ಯೆ ನಾವೀನ್ಯತೆ ಹಾಗೂ ಭವಿಷ್ಯಾತ್ಮಕ ಕಲ್ಪನೆಯುಳ್ಳ ಕಿರು ಸ್ತಬ್ದಚಿತ್ರ ತಯಾರಿಸುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಸಕ್ತರಿಗೆ ಸ್ತಬ್ದಚಿತ್ರ ಉಪಸಮಿತಿಯು ಆಹ್ವಾನಿಸಿದೆ.

ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಅತ್ಯುತ್ತಮ ವಿನ್ಯಾಸವನ್ನು ಪೂರ್ಣಪ್ರಮಾಣದ ಸ್ತಬ್ದಚಿತ್ರ ಆಗಿ ಪರಿವರ್ತಿಸಲಾಗುವುದು. ಇದರ ಜೊತೆಗೆ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಪ್ರದರ್ಶಿಸಲಾಗುತ್ತದೆ ಎಂದು ಉಪಸಮಿತಿ ತಿಳಿಸಿದೆ.

ಇನ್ನು ಈ ಸ್ಪರ್ಧೆಯಲ್ಲಿ ಎಲ್ಲಾ ಭಾರತೀಯ ನಾಗರಿಕರಿಗೆ ಅವಕಾಶವಿದ್ದು, ತಂಡವು ಒಂದು ಪ್ರವೇಶ ಪತ್ರವನ್ನು ಮಾತ್ರ ಸಲ್ಲಿಸಬಹುದಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಸ್ಪರ್ಧಿಗಳು ಸೆಪ್ಟೆಂಬರ್.‌13ರೊಳಗೆ ನೋಂದಾಯಿಸಬೇಕು ಎಂದು ತಿಳಿಸಲಾಗಿದೆ.

ಅತ್ಯುತ್ತಮ ಮೂರು ಸ್ತಬ್ದಚಿತ್ರಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು ಎಂದು ತಿಳಿಸಲಾಗಿದ್ದು, ಆಯ್ಕೆಯಾದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಇದರ ಜೊತೆಗೆ ಅತ್ಯುತ್ತಮ 10 ಕಿರು ಸ್ತಬ್ಧಚಿತ್ರಗಳನ್ನು ದಸರಾ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

10 mins ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

24 mins ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

2 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

2 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

3 hours ago