ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ರಾಜ್ಯ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ಬೆನ್ನಲ್ಲೇ ಈ ಬಾರಿಯ ದಸರಾ ಕ್ರೀಡಾಕೂಟವು ಅಕ್ಟೋಬರ್.3 ರಿಂದ 6ರವರೆಗೆ ನಡೆಯಲಿದೆ.
ಈ ಕ್ರೀಡಾಕೂಟಕ್ಕೆ ಪ್ಯಾರಿಸ್ ಒಲಂಪಿಕ್ಸ್‌ನ ಕಂಚಿನ ಪದಕ ವಿಜೇತ ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಅವರು ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್.3ರಂದು ಮಧ್ಯಾಹ್ನ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಸರಾ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಲಿದ್ದಾರೆ.
ಈ ವೇಳೆ ಹರ್ಮನ್ ಪ್ರೀತ್ ಸಿಂಗ್ ಅವರು ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಇವರ ಜೊತೆಗೆ ರಾಜ್ಯ ಸರ್ಕಾರದ ಹಲವು ಸಚಿವರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…