Mysore
26
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮೈಸೂರು ದಸರಾ: ರಾಜಮನೆತನವನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.

ಇಂದು ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ಧನ, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಚಂದ್ರಶೇಖರ್ ಸೇರಿದಂತೆ ಮುಂತಾದವರು ಹಾಜರಿದ್ದರು.

 

 

 

Tags:
error: Content is protected !!