ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.
ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸವಾಲು ಪೊಲೀಸ್ ಇಲಾಖೆಗೆ ಇದೆ.
ಇದೆಲ್ಲವನ್ನು ನಿಭಾಯಿಸಿಕೊಂಡು ಹೋಗಲು ಹೆಚ್ಚುವರಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒದಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಾರಿಯ ದಸರಾ ಕಾರ್ಯಕ್ರಮಗಳ ಸಾಲಿಗೆ ಡ್ರೋನ್ ಶೋ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಅದಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಹೀಗಾಗಿ ಆ ಕಾರ್ಯಕ್ರಮ ನಡೆಯುವ ಸ್ಥಳಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಬೇಕೆಂದು ಮನವಿ ಮಾಡಲಾಗಿದೆ.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…