ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಅರಮನೆಯಲ್ಲಿ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್ ಹಾಗೂ ನಿಶಾನೆ ಆನೆಯಾಗಿ ಭೀಮನನ್ನು ಆಯ್ಕೆ ಮಾಡಲಾಗಿದೆ.
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದ್ದಾರೆ.
ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಭೀಮ, ಕಂಜನ್, ಸುಗ್ರೀವ, ಗೋಪಿ, ಏಕಲವ್ಯ, ಲಕ್ಷ್ಮಿ ಹಾಗೂ ಹಿರಣ್ಯ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿಗೆ ಕರೆದೊಯ್ಯಲಾಗಿತ್ತು.
ಈ ವೇಳೆ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರು ಕಂಜನ್ ಆನೆಯನ್ನು ಪಟ್ಟದ ಆನೆಯಾಗಿಯೂ ಹಾಗೂ ಭೀಮ ಆನೆಯನ್ನು ಪಟ್ಟದ ನಿಶಾನೆ ಆನೆಯಾಗಿಯೂ ಆಯ್ಕೆ ಮಾಡಿದ್ದಾರೆ.