Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಆಕ್ಟೋಬರ್.‌3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ: ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ

ಮೈಸೂರು: ಆಕ್ಟೋಬರ್.‌3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಈ ಬಾರಿ 508 ಕಲಾತಂಡಗಳ 6500 ಕಲಾವಿದರಿಗೆ ವಿವಿಧ 11 ವೇದಿಕೆಗಳಲ್ಲಿ ಅವಕಾಶ ನೀಡಲಾಗಿದೆ.

ಅರಮನೆ ಆವರಣ ಸೇರಿದಂತೆ ಹಲವೆಡೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಗೀತ ಕ್ಷೇತ್ರದ ಖ್ಯಾತನಾಮರನ್ನು ಈ ಬಾರಿಯ ದಸರೆಗೆ ಆಹ್ವಾನಿಸಿದ್ದು, ಬಹಳ ಮಂದಿ ಸೇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಉತ್ತನಹಳ್ಳಿ ಬಳಿಯ 80 ಎಕರೆ ವಿಶಾಲವಾದ ಜಾಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Tags: