ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಈಗಿರುವಾಗಲೇ ಮೈಸೂರಿನಲ್ಲಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ದಸರಾ ಬರುವ ಒಂದು ವಾರದ ಮುಂಚೆಯೇ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ.
ಮೈಸೂರು ಅರಮನೆಯ ಸುತ್ತ ಮುತ್ತ ಬೆಳೆದಿರುವ ಗಿಡಗಂಟೆಗಳನ್ನು ಸಹ ಕ್ಲೀನ್ ಮಾಡಲಾಗಿದ್ದು, ಇನ್ನೇನು ಕೆಲ ದಿನಗಳಲ್ಲಿ ಅರಮನೆ ಸುತ್ತ ಪೇಂಟಿಂಗ್ ಸಹ ಮಾಡಲಾಗುತ್ತದೆ.
ಇನ್ನು ಅರಮನೆಯಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಜಂಬೂಸವಾರಿಗೆ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿವೆ.
ಇದರ ಜೊತೆಗೆ ಮಾವುತರು ಹಾಗೂ ಕಾವಾಡಿಗರು ಕೂಡ ಜಂಬೂಸವಾರಿ ಮೆರವಣಿಗೆಗೆ ಸಜ್ಜಾಗುತ್ತಿದ್ದು, ಆನೆಗಳ ತಾಲೀಮಿನಲ್ಲಿ ಭಾಗಿಯಾಗಿ, ಪ್ರತೀ ತಾಲೀಮನ್ನೂ ಕೂಡ ಯಶಸ್ವಿಯಾಗಿಸುತ್ತಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…