ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿದ್ದು, ಸೆಪ್ಟೆಂಬರ್.5ರಂದು ಮೈಸೂರಿಗೆ ಎರಡನೇ ಹಂತದ ಗಜಪಡೆ ಆಗಮಿಸಲಿವೆ.
ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು 14 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು, ಈಗಾಗಲೇ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿವೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತಿದೆ. ಬೆಳಿಗ್ಗೆ ಹಾಗೂ ಸಂಜೆ ರಾಜಬೀದಿಯಲ್ಲಿ ಕ್ಯಾಪ್ಟನ್ ಅಭಿಮನ್ಯುವನ್ನು ನೋಡಲು ಜನರು ಜಮಾಯಿಸುತ್ತಾರೆ.
ಇನ್ನು ಸೆಪ್ಟೆಂಬರ್.5 ರಂದು ಮೈಸೂರಿಗೆ ಎರಡನೇ ಹಂತದಲ್ಲಿ ದುಬಾರೆ ಆನೆ ಶಿಬಿರದಿಂದ ಪ್ರಶಾಂತ್, ಸುಗ್ರೀವಾ, ಮತ್ತಿಗೋಡು ಆನೆ ಶಿಬಿರದಿಂದ ಮಹೇಂದ್ರ, ದೊಡ್ಡ ಹರವೇ ಶಿಬಿರದಿಂದ ಲಕ್ಷ್ಮೀ, ರಾಮಂಪುರ ಆನೆ ಶಿಬಿರದಿಂದ ಈರಣ್ಯ ಆನೆಗಳು ಆಗಮಿಸಲಿವೆ.
ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಹೆಚ್ಚುವರಿ ಗಜಪಡೆ, ಕಾವಾಡಿ, ಮಾವುತರಿಗಾಗಿ ತಂಗುದಾಣ ನಿರ್ಮಾಣ ಮಾಡಲಾಗುತ್ತಿದೆ. ಆನೆಗಳ ವಾಸ್ತವ್ಯಕ್ಕೂ ಹೆಚ್ಚುವರಿ ತಾತ್ಕಾಲಿಕ ಶೆಡ್ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರು ಬ್ಯುಸಿಯಾಗಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…