ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ಮೈಸೂರಿನಲ್ಲಿ ದಸರೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಈ ಬೆನ್ನಲ್ಲೇ ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ.
ನಿನ್ನೆಯಷ್ಟೇ ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಗಿದ್ದು, ಆನೆಯ ತೂಕದ ಆಧಾರದ ಮೇಲೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ.
ಪೌಷ್ಠಿಕ ಆಹಾರ ತಯಾರಿಕೆಗೆಂದೇ ಹಲವು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ಆನೆಗಳ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಲಾಗಿದೆ.
ದಸರಾ ಮುಗಿಯುವವರೆಗೂ ಗಜಪಡೆಗೆ ಪೌಷ್ಠಿಕ ಆಹಾರವನ್ನೇ ನೀಡಲಾಗುತ್ತದೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದು, ಜಂಬೂಸವಾರಿ ಯಶಸ್ವಿಗೆ ಮಾವುತರು, ಕಾವಾಡಿಗರು ಸೇರಿದಂತೆ ಅಧಿಕಾರಿ ವರ್ಗ ಈಗಿನಿಂದಲೇ ಶ್ರಮ ವಹಿಸುತ್ತಿದೆ.