ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ದೀಪ ಬೆಳಗುವುದರ ಮೂಲಕ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ರೋರಿಂಗ್ ಸ್ಟಾರ್ ಮುರುಳಿ ಮತ್ತು ರುಕ್ಮಿಣಿ ವಸಂತ ಅವರು ಡೊಳ್ಳು ಬಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಖುಷಿಪಟ್ಟರು.
ಶಾಸಕ ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. ಗಾಯಿತ್ರಿ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ದಸರಾ ಯುವ ಸಮಿತಿ ವಿಶೇಷಾಧಿಕಾರಿ ಎನ್. ವಿಷ್ಣುವರ್ಧನ್, ದಸರಾ ವಸ್ತಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…