ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಲಿವೆ.
ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಇಂದು ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಲಿದ್ದು, ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಅರಮನೆಯಲ್ಲಿ ಸಂಜೆ ಐದು ಗಂಟೆಗೆ ಮಹೇಂದ್ರ ನೇತೃತ್ವದ ಐದು ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಲಾಗುತ್ತದೆ.
ಮತ್ತಿಗೋಡು ಆನೆ ಶಿಬಿರದಿಂದ ಮಹೇಂದ್ರ, ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ರಾಮಂಪುರ ಶಿಬಿರದಿಂದ ಲಕ್ಷ್ಮಿ ಹಾಗೂ ಹಿರಣ್ಯ ಆನೆಗಳು ಇಂದು ಅರಮನೆಗೆ ಆಗಮಿಸಲಿವೆ.
ಈಗಾಗಲೇ ಅಂಬಾರಿ ಆನೆ ಅಭಿಮನ್ಯು ನೇತೃತ್ವದ ಮೊದಲ ತಂಡದ ಭೀಮ, ಧನಂಜಯ, ಗೋಪಿ, ವರಲಕ್ಷ್ಮಿ, ಲಕ್ಷ್ಮಿ, ಕಂಜನ್, ರೋಹಿತ್ ಹಾಗೂ ಏಕಲವ್ಯ ಆನೆಗಳು ಅರಮನೆಯಲ್ಲಿ ಬೀಡುಬಿಟ್ಟಿದ್ದು, ನಗರದ ವಾತಾವರಣಕ್ಕೆ ಹೊಂದಿಕೊಂಡಿವೆ.
ದಸರಾ ಗಜಪಡೆಗೆ ದಿನನಿತ್ಯ ತಾಲೀಮು ನಡೆಸಲಾಗುತ್ತಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಮ್‌ಗೆ ನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ನಡಿಗೆ ಹಾಗೂ ಭಾರ ಹೊರುವ ತಾಲೀಮು ನಡೆಸಲಾಗುತ್ತಿದೆ.
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…
ಪ್ರಕಾಶ್ ರಾಜ್ ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ…