ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿದಳಕ್ಕೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು.
ಇಂದು ನಡೆದ ಎರಡನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಹಾಗೂ ಅಶ್ವಾರೋಹಿದಳ ಭಾಗಿಯಾಗಿದ್ದವು.
ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಿಡಿಮದ್ದು ತಾಲೀಮಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ನಗರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಸೇರಿದಂತೆ ನೂರಾರು ಜನ ಭಾಗಿಯಾಗಿದ್ದರು.
ಅಕ್ಟೋಬರ್.1ರಂದು ಮೂರನೇ ಹಂತದ ತಾಲೀಮು ನಡೆಯಲಿದ್ದು, ಗಜಪಡೆಯನ್ನು ದಸರಾ ಜಂಬೂಸವಾರಿ ದಿನ ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಸಿಡಿಮದ್ದು ಶಬ್ದಕ್ಕೆ ಹೆದರದ ರೀತಿಯಲ್ಲಿ ತರಬೇತಿ ನೀಡಲಾಗುತ್ತಿದೆ.