ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತಾ ಕಾರ್ಯಗಳು ತೀವ್ರ ವೇಗವಾಗಿ ನಡೆಯುತ್ತಿದ್ದು ಇಂದು(ಸೆ.21) ಯುವ ಸಂಭ್ರಮದ ಪೋಸ್ಟರ್ ಹಾಗೂ ದಸರಾದ ವೆಬ್‌ಸೈಟ್ ಅನ್ನು ಉದ್ಘಾಟಿಸಲಾಯಿತು.
ಸಾಂಸ್ಕೃತಿಕ ನಗರಿಯಲ್ಲಿ ಪ್ರತಿ ವರ್ಷ ನಡೆಯುವ ವಿಶ್ವ ವಿಖ್ಯಾತ ಮೈಸೂರು ದಸರಾದ ವೆಬ್‌ಸೈಟ್ ಹಾಗೂ ಯುವ ಸಂಭ್ರಮದ ಪೋಸ್ಟರ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣು ವರ್ಧನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಅಪಾರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.