ಮೈಸೂರು ನಗರ

ಮೈಸೂರು ದಸರಾ: ಯೋಗ ಚಾರಣ ಹಾಗೂ ಯೋಗ ನಮಸ್ಕಾರ ಕಾರ್ಯಕ್ರಮ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಉಪಸಮಿತಿ ವತಿಯಿಂದ ಯೋಗ ಚಾರಣ ಹಾಗೂ ಯೋಗ ನಮಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ನಗರದ ಚಾಮುಂಡಿಬೆಟ್ಟದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು.

ಇದನ್ನು ಓದಿ : ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ

ಈ ವೇಳೆ ಮಾತನಾಡಿದ ಅವರು, ಭಾರತದಲ್ಲಿ ಹುಟ್ಟಿರುವ ಯೋಗವು ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಶ್ವ ಮನ್ನಣೆ ಪಡೆದುಕೊಂಡಿದೆ. ಯೋಗ ಮಾಡುವುದರಿಂದ ರಕ್ತ ಪರಿಚಲನವಾಗಿ, ಮನಸ್ಸು ಮತ್ತು ದೇಹ ಆರೋಗ್ಯವಾಗಿರುತ್ತದೆ.

ಪ್ರತಿಯೊಬ್ಬರೂ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಇಂದು ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ 6 ಗಂಟೆಗೆ ಚಾಮುಂಡಿಬೆಟ್ಟದ ಮೆಟ್ಟಿಲು ಹತ್ತಿಕೊಂಡು, ಚಾಮುಂಡಿಬೆಟ್ಟದ ಮೇಲಿನ ಆವರಣ ತಲುಪಿ, ವಜ್ರಾಸನ, ವೀರಾಸನ, ವೀರಭದ್ರ ಆಸನ ಹಾಗೂ ಸಿಂಹ ಘರ್ಷನೆ ಸೇರಿದಂತೆ ಹಲವು ಭಂಗಿಯ ಯೋಗಾಸನಗಳನ್ನು ಮಾಡಿದರು. ಕಾರ್ಯಕ್ರಮದಲ್ಲಿ 500ಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

1 hour ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago