ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಕಂಡುಬರುತ್ತಿದ್ದು, ಇವುಗಳನ್ನು ಪತ್ತೆಹಚ್ಚುವಲ್ಲಿ ಮೈಸೂರು ಪೊಲೀಸರು ವಿಫಲರಾಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಮೈಸೂರು ಪೊಲೀಸರಿಗೆ ಮಾಹಿತಿ ನೀಡದೆಯೇ ದೆಹಲಿ ಎನ್‌ಸಿಬಿಯು ಫಿನಾಯಿಲ್ ಕೆಮಿಕಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದೆ.
ಗುಜರಾತ್‌ನಲ್ಲಿ ಡ್ರಗ್ಸ್ ಜಾಲ ಪತ್ತೆ ಪ್ರಕರಣದಲ್ಲಿ ಬಂಧಿತ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಲೇಬಲ್ ಇಲ್ಲದ ಕೆಮಿಕಲ್ ಖಾಲಿ ಬಾಟಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಮುಂಬೈ ಪೊಲೀಸರು ಕಳೆದ ಬಾರಿ ಮೈಸೂರಿನಲ್ಲಿ ದಾಳಿ ನಡೆಸಿ 30 ಕೋಟಿ ಮೌಲ್ಯದ ಡ್ರಗ್ಸ್ ಘಟಕವನ್ನು ಪತ್ತೆ ಹಚ್ಚಿದ್ದರು. ಇದೀಗ ದೆಹಲಿ ಪೊಲೀಸರು ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮೈಸೂರು ಪೊಲೀಸರು ಇಂತಹ ದೊಡ್ಡ ದೊಡ್ಡ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಇನ್ನು ಮುಂದಾದರೂ ಡ್ರಗ್ಸ್ ಮುಕ್ತ ಮೈಸೂರು ಮಾಡಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಎಲ್ಲರ ಮನವಿಯಾಗಿದೆ.





