ಮೈಸೂರು: ಚಿರತೆ ಬಾಯಿಯಿಂದ ನಾಯಿ ಜಸ್ಟ್ ಮಿಸ್ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ತೀವ್ರ ಆತಂಕಗೊಳಿಸಿದೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಚಿರತೆಯೊಂದು ನಾಯಿಗಳ ಬೇಟೆಗೆ ಇಳಿದಿದೆ. ಚಿರತೆಯನ್ನು ಕಂಡು ಬೀದಿ ನಾಯಿಗಳು ಪೇರಿಕಿತ್ತಿದ್ದು, ಒಂದು ನಾಯಿಯ ಮುಖದ ಭಾಗಕ್ಕೆ ಗಂಭೀರ ಗಾಯವಾಗಿದೆ.
ಚಿರತೆ ದಾಳಿಯ ದೃಶ್ಯ ಮನೆಯೊಂದರಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಮನೆಯಿಂದ ಹೊರಬರಲು ಜನರು ಭಯಪಡುತ್ತಿದ್ದು, ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.





