mysureu police
ಮೈಸೂರು: ಮೈಸೂರು ನಗರ ಪೊಲೀಸ್ ಇಲಾಖೆ ವತಿಯಿಂದ ಇಂದು ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಉದ್ಘಾಟನೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಾವಗಲ್ ಶ್ರೀನಾಥ್ ಅವರು, ಸಮಾಜದಲ್ಲಿ ಒಳ್ಳೆಯವರು, ಕೆಟ್ಟವರು ಎಲ್ಲರೂ ಇರುತ್ತಾರೆ. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪೊಲೀಸರ ಪಾತ್ರ ಮಹತ್ವವಾಗಿದೆ. ಅನೇಕ ಜನರಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಗೊತ್ತಿರುವುದಿಲ್ಲ. ಈ ನಿಟ್ಟಿನಲ್ಲಿ ಪೊಲೀಸರ ಜೊತೆ ನಾವು ಕೈಜೋಡಿಸಬೇಕು. ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮ ಚೆನ್ನಾಗಿದೆ. ಉತ್ತಮ ಸಮಾಜ ನಿರ್ಮಾಣ ಮಾಡುವಾಗ ನಮ್ಮ ಪಾತ್ರವೂ ಇರಬೇಕು. ಪೊಲೀಸರು ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.
ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾತನಾಡಿ, ಗಾಂಜಾ ಮತ್ತು ಡ್ರಗ್ಸ್ ನಿರಂತರವಾಗಿ ಮಾರಾಟ ಮಾಡುವವರನ್ನು ಗಡಿಪಾರು ಮಾಡಲಾಗುವುದು. ಕಳೆದ ಮೂರು ದಿನಗಳಿಂದ ಆರು ಜನರನ್ನು ಬಂಧಿಸಲಾಗಿದೆ. 100ಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 60ಕ್ಕೂ ಹೆಚ್ಚು ಜನರು ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ಬಿಂದುಮಣಿ, ಸುಂದರ್ ರಾಜ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…