ಮೈಸೂರು : ಮೈಸೂರು ನಗರಿಯೂ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದ್ದು, ಮೃಗಾಲಯ, ಚಾಮುಂಡಿ ಬೆಟ್ಟ, ಅರಮನೆ ಹೀಗೆ ಇಲ್ಲಿನ ಅನೇಕ ಪ್ರವಾಸಿ ತಾಣಗಳಿಗೆ ಪ್ರತಿ ದಿವಸವೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಈ ದೃಷ್ಟಿಯಿಂದ ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸಲು ಅರಮನೆಗೆ ಹೊಂದಿಕೊಂಡಂತೆ ಇರುವ ಕರ್ನಾಟಕ ವಸ್ತು ಪ್ರದರ್ಶನದಲ್ಲಿ ಇದೇ ಮೊದಲ ಬಾರಿಗೆ ಡ್ರಾಗನ್ ಬೋಟಿಂಗ್ ನಿರ್ಮಾಣ ಮಾಡಲಾಗಿದೆ.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರವೂ ಡ್ರಾಗನ್ ಬೋಟಿಂಗ್‌ನ್ನು ನಿರ್ಮಿಸಿದ್ದು, ಸುಮಾರು 3.59 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದೆ. ಈ ಡ್ರಾಗನ್ ಬೋಟಿಂಗ್ ವಸ್ತು ಪ್ರದರ್ಶನ ವೀಕ್ಷಿಸಲು ಬರುವ ಜನರನ್ನು ರಂಜಿಸಲು ಸಿದ್ಧವಾಗಿದೆ. ಡ್ರಾಗನ್ ಮಾದರಿ ಸುತ್ತಲೂ ಕೊಳವನ್ನು ನಿರ್ಮಿಸಿ, ಅಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಶುಲ್ಕ ಪಾವತಿಸಿ ಬೋಟಿಂಗ್ ವಿಹಾರ ನಡೆಸಬಹುದಾಗಿದೆ.
ನಾಳೆ ಸಿಎಂ ಉದ್ಘಾಟನೆ
ದಸರಾ ವೇಳೆಗೆ ಉದ್ಘಾಟನೆ ಆಗಬೇಕಿದ್ದ ಈ ಡ್ರಾಗನ್ ಬೋಟಿಂಗ್ ಅನೇಕ ಕಾರಣಗಳಿಂದ ಉದ್ಘಾಟನೆ ಆಗಿರಲಿಲ್ಲ. ಅಂತಿಮವಾಗಿ ನಾಳೆ (ಜ.5)ಸಿಎಂ ಸಿದ್ದರಾಮಯ್ಯ ಅವರು ಡ್ರಾಗನ್ ಬೋಟಿಂಗ್‌ನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಸಾರ್ವಜನಿಕರು ಬೋಟಿಂಗ್ ವಿಹಾರವನ್ನು ನಡೆಸಬಹುದಾಗಿದೆ.
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…
ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತ ಕುಟುಂಬಕ್ಕೆ ತಲಾ 5 ಲಕ್ಷ…
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ…
ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ…
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…