Mysore
22
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು.

ಮೈಸೂರು ನಗರದ ಜೆ.ಕೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಜಾಗೃತಿ ಅಭಿಯಾನಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ ನೀಡಿದರು.

ಇದನ್ನು ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಪರಿವರ್ತನಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಕರ್ನಲ್‌ ಸಂಜೀವ್.ವೈ.ಕೆ, ಶ್ರೀ ನಿತ್ಯಾನಂದ ವಿವೇಕವಂಶಿ ಸೇರಿದಂತೆ ಹಲವುರ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಕಾಲೇಜು ವಿದ್ಯಾರ್ಥಿಗಳು, ಯುವ ಜನತೆ ಡ್ರಗ್ಸ್‌ ಚಟಕ್ಕೆ ಬಲಿಯಾಗಿ ಪೋಷಕರ ಆಸೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ ಡ್ರಗ್ಸ್‌ ಚಟಕ್ಕೆ ಯಾರೂ ಕೂಡ ಬಲಿಯಾಗಬಾರದು. ಪೋಷಕರು ಕೂಡ ಮಕ್ಕಳ ಮೇಲೆ ನಿಗಾ ಇಡಬೇಕು. ಡ್ರಗ್ಸ್‌ ಮುಕ್ತ ಕರ್ನಾಟಕ ಆಗಲೇಬೇಕು ಎಂದು ಹೇಳಿದರು.

Tags:
error: Content is protected !!