ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ವತಿಯಿಂದ ಅ.3ರಿಂದ 11ರವರೆಗೆ , ಹಳೆ ಡಿ.ಸಿ. ಕಚೇರಿ ಎದುರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024”ನ್ನು ಹಮ್ಮಿಕೊಳ್ಳಲಾಗುವುದು.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1000-00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಂದರೆ https://kpp.karnataka.gov.inನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆ.30ರ ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ಇವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ದೂ,ಸಂ :080-22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…