ಮೈಸೂರು: ಜಿಲ್ಲೆಯ ವಿವಿಧೆಡೆ ಹುಲಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.
ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಎಐ ಹುಲಿ ಹಾವಳಿಗೆ ಹೈರಾಣಾದ ಜನತೆ: ಕಿಡಿಗೇಡಿಗಳಿಗೆ ವಾರ್ನಿಂಗ್ ಕೊಟ್ಟ ಅರಣ್ಯ ಇಲಾಖೆ
ಈ ವೇಳೆ ಮಾತನಾಡಿದ ರೈತರು, ಹುಲಿ ದಾಳಿಯನ್ನು ನಿಯಂತ್ರಿಸುವಲ್ಲಿ ಹಾಗೂ ಜನ, ಜಾನುವಾರುಗಳ ರಕ್ಷಣೆಯಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಅಕ್ರಮ ರೆಸಾರ್ಟ್‌ಗಳಿಂದಾಗಿ ವನ್ಯಜೀವಿಗಳ ಓಡಾಟಕ್ಕೆ ಅಡಚಣೆಯಾಗಿದ್ದು, ಅವುಗಳ ನಾಡಿನ ಕಡೆ ಬರುತ್ತಿವೆ ಎಂದು ಆರೋಪ ಮಾಡಿದರು. ಪ್ರತಿಭಟನೆ ನಡೆದ ಬಳಿಕ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.





