Mysore
28
few clouds

Social Media

ಮಂಗಳವಾರ, 27 ಜನವರಿ 2026
Light
Dark

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ 

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ ಫ್ಯಾಷನ್ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ ೫ ಗಂಟೆಗೆ ಪಿ.ಕಾಳಿಂಗರಾವ್ ಗಾನಮಂಟಪ ದಲ್ಲಿ ಅಂತರ ರಾಜ್ಯಮಟ್ಟದ ಫ್ಯಾಷನ್ ಶೋ ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳು ನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದಿಂದಲೂ ಸ್ಪರ್ಧಿಗಳು ಆಗಮಿಸುತ್ತಿದ್ದಾರೆ. ಈಗಾಗಲೇ ನೂರಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕಳೆದ ಎರಡು ತಿಂಗಳಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಡಿಷನ್‌ಗಳನ್ನು ತಿಬ್ಬಾಸ್ ಗ್ರೂಪ್‌ನಿಂದ ನಡೆಸಲಾಗಿದ್ದು, ಅಲ್ಲಿ ಆಯ್ಕೆಯಾದವರು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿ, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಸಾಂಪ್ರದಾಯಿಕ ಹಾಗೂ ಭಾರತದ ಸಂಸ್ಕೃತಿ ಬಿಂಬಿಸುವ ಉಡುಗೆ, ತೊಡುಗೆಗಳನ್ನೇ ಧರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ. ಇದರ ಜೊತೆಗೆ ನಮ್ಮ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ಫ್ಯಾಷನ್ ಉದ್ಯಮಕ್ಕೆ ಪರಿಚಯಿಸುವ ಒಂದು ಮಹತ್ತರವಾದ ಉದ್ದೇಶದೊಂದಿಗೆ ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಮೂಲಕ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದರು.

ಕಾರ್ಯಕ್ರಮಕ್ಕೆ ಚಲನಚಿತ್ರ ನಟರು, ನಿರ್ದೇಶಕರು, ನಿರ್ಮಾಪಕರನ್ನು ಆಹ್ವಾನಿಸಲಾಗಿದೆ. ೨ರಿಂದ ೬೫ ವರ್ಷದವರೆಗಿನ ವಯೋಮಾನದ ಯಾರು ಬೇಕಾದರೂ ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ತಿಬ್ಬಾಸ್ ಗ್ರೂಪ್‌ನ ಸೋಷಿಯಲ್ ಮೀಡಿಯಾಗಳಲ್ಲಿ ಮಾಹಿತಿಯನ್ನು ಪಡೆಯಬಹುದು ಹಾಗೂ ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಮೊ.ಸಂ.: ೯೮೮೦೬ ೪೭೩೯೨ಗೆ ಕರೆ ಮಾಡಿ ಡಿ.೨೭ರೊಳಗೆ ನೇರವಾಗಿ ಹೆಸರು ನೋದಾಯಿಸಿಕೊಳ್ಳಬಹುದು ಎಂದರು.

ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಸಂಸ್ಥಾಪಕರಾದ ಶರ್ವಿನ್, ವ್ಯವಸ್ಥಾಪಕ ನಿರ್ದೇಶಕರಾದ ಐ.ಡಿ.ಶಿವಾನಿ, ದಸರಾ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್, ಭವ್ಯ ಮುಂತಾದವರು ಹಾಜರಿದ್ದರು. ಇದೇ ವೇಳೆ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

Tags:
error: Content is protected !!