ಮೈಸೂರು ನಗರ

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ ಡಿಸಿ ಅಮಾನತಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಶಿಫಾರಸ್ಸು ಮಾಡುವಂತೆ ಸೂಚಿಸಿದ್ದಾರೆ.

ಈ ಸಂಬಂಧಿಸಿದಂತೆ ವರದಿಯನ್ನು ನೀಡಲು ಮೈಸೂರು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ. ಮಂಗಳವಾರ ಮೈಸೂರಿನಲ್ಲಿ ಈ ಕುರಿತಾಗಿ ಮಾತನಾಡಿದ ಅವರು, ಪಬ್ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ ಎಂದು ತಿಳಿಸಿದರು.

ಮಾಲೀಕ ಪ್ರೀತಂ ಪುನೀತ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ವ್ಯವಸ್ಥಾಪಕ ಅವಿನಾಶ್ ಹಾಗೂ ಸಿಬ್ಬಂದಿ ಯೋಗೇಶ್ ಅವರಿಗೆ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರು ಸುಯೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯತೀಂದ್ರ ಭೇಟಿ
ಈ ನಡುವೆ ಮಂಗಳವಾರ ಬೆಳಿಗ್ಗೆ ನಗರಾಭಿವೃದ್ಧಿ ಸಚಿವ ಯತೀಂದ್ರ ಅವರು ನಗರದ ಕೆಆರ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.

ನಂತರ ಜೆಎಸ್‌ಎಸ್ ಆಸ್ಪತ್ರೆಯ ಸುಟ್ಟ ಗಾಯಗಳ ವಿಭಾಗಕ್ಕೆ ತೆರಳಿ ಮ್ಯಾನೇಜರ್ ಅವಿನಾಶ್ ಹಾಗೂ ಇತರನ್ನು ಭೇಟಿ ಮಾಡಿ ಅವರಿಗೆ ಹಾಗೂ ಅವರ ಕುಟುಂಬದವರಿಗೆ ದೈರ್ಯ ತುಂಬುವ ಕೆಲಸ ಮಾಡಿದರು.

ಪಬ್‌ಗೆ ಭೇಟಿ
ನಂತರ ಯತೀಂದ್ರ ಅವರು ದಟ್ಟಗಳ್ಳಿ ಬಳಿ ಇರುವ ಮಾರ ಪಬ್ ಹಾಗೂ ರೆಸ್ಟೋರೆಂಟ್‌ಗೆ ಭೇಟಿ ನೀಡಿದರು. ಅವರೊಂದಿಗೆ ಶಾಸಕ ಕೆ.ಹರೀಶ್‌ಗೌಡ ಹಾಗೂ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹಾಜರಿದ್ದರು.

ದೂರು ದಾಖಲು
ಇದೇ ವೇಳೆ ರೆಸ್ಟೋರೆಂಟ್ ನಡೆಸುವ ಸಂಬಂದ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದಿರುವ ಸಂಬಂದ ಪಬ್‌ನ ಮಾಲೀಕ ಪ್ರೀತಂ ಪುನೀತ್ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.

ಶವ ರವಾನೆ
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ಮೃತ ಸಾಹಿನ್ ಶವವನ್ನು ಮಂಗಳವಾರ ಸಂಜೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು ಮೃತರ ಸಹೋದರಿ ಅನಾಮಿಕ ಹಾಗೂ ಸ್ನೇಹಿತರು ಶವವನ್ನು ವಿಮಾನದ ಮೂಲಕ ಹುಟ್ಟೂರಿಗೆ ಕೊಂಡೊಯ್ದರು. ಜಿಲ್ಲಾಡಳಿತ ಅವರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಟ್ಟಿದೆ.

ಪ್ರಕಾಶ್ ಕುಟುಂಬಸ್ಥರ ಬಗ್ಗೆ ಇಲ್ಲ ಮಾಹಿತಿ
ಈ ನಡುವೆ ಬೆಂಕಿ ಅವಘಡದಲ್ಲಿ ಸಾವೀಗೀಡಾದ ನೇಪಾಳ ಮೂಲದ ಮತ್ತೊಬ್ಬ ಯುವಕ ಪ್ರಕಾಶ್ ಕುಟುಂಬಸ್ಥರ ಬಗ್ಗೆ ಇದುವರೆವಿಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

4 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

4 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

4 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

5 hours ago