ಮೈಸೂರು ನಗರ

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ.

ಲಷ್ಕರ್ ಮೊಹಲ್ಲಾ ನಿವಾಸಿ, ಆಟೋ ಚಾಲಕ ಅರ್ಜುನ್ ಎಂಬಾತನೇ ಸ್ನೇಹಿತರಾದ ಗಿರಿದರ್ಶಿನಿ ಬಡಾವಣೆ ನಿವಾಸಿ ದರ್ಶನ್ ಹಾಗೂ ನಿತಿನ್ ಎಂಬವರಿಂದ ಹಲ್ಲೆಗೊಳಗಾದವನು. ಅರ್ಜುನ್‌ಗೆ ದರ್ಶನ್ ಹಾಗೂ ನಿತಿನ್ ಕೆಲ ದಿನಗಳ ಹಿಂದಷ್ಟೇ ಪರಿಚಿತರಾಗಿರುತ್ತಾರೆ. ಡಿ.೬ ರಂದು ಅರ್ಜುನ್ ಹಾಗೂ ಸ್ನೇಹಿತರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕರೆ ಮಾಡಿದ ದರ್ಶನ್ ನನಗೆ ಹಣ ಬೇಕು ಫೋನ್ ಪೇ ಮಾಡು ಎಂದು ಹೇಳಿದ್ದಾನೆ. ಆದರೆ, ನನ್ನ ಬಳಿ ಹಣವಿಲ್ಲ ಎಂದು ಅರ್ಜುನ್ ತಿಳಿಸಿದ್ದಾನೆ. ಇದರಿಂದ ಕೋಪಗೊಂಡ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ನಡುವೆ ಅರ್ಜುನ್ ಪ್ರವಾಸ ಮುಗಿಸಿ ಡಿ.೭ ರಂದು ಮೈಸೂರಿಗೆ ವಾಪಸ್ಸಾಗಿದ್ದಾನೆ.

ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಅಂದು ರಾತ್ರಿ ಕರೆ ಮಾಡಿದ ದರ್ಶನ್ ಸಿದ್ದಾರ್ಥ ಬಡಾವಣೆಗೆ ಬರುವಂತೆ ತಿಳಿಸಿದ್ದಾನೆ. ಹೀಗಾಗಿ ಅರ್ಜುನ್ ಹಾಗೂ ಸ್ನೇಹಿತರಾದ ರವಿ, ಸತೀಶ್ ಹಾಗೂ ಚಂದನ್ ಆಟೋ ಮೂಲಕ ಅಲ್ಲಿಗೆ ತೆರಳಿದ್ದಾರೆ.

ಈ ವೇಳೆ ಅಲ್ಲಿಗೆ ಬಂದ ದರ್ಶನ್ ಹಣದ ವಿಚಾರವಾಗಿ ಜಗಳ ಆರಂಭಿಸಿದ್ದಾನೆ. ನಂತರ ತನ್ನೊಡನೆ ತಂದಿದ್ದ ಚಾಕುವಿನಿಂದ ಅರ್ಜುನ್‌ಗೆ ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ಆತನನ್ನು ಸ್ಥಳದಲ್ಲಿದ್ದ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

8 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago