ಮೈಸೂರು: ಭ್ರೂಣಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಗ್ರಾಮದ ಸಮೀಪ ಹನುಗನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಐಷಾರಾಮಿ ಬಂಗಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಮಾಡಲಾಗುತ್ತಿತ್ತು.
ಈ ಬಂಗಲೆಗೆ ಗರ್ಭಣಿಯರನ್ನು ಕರೆತಂದು ಅವರ ಭ್ರೂಣಲಿಂಗ ಪತ್ತೆ ಮಾಡಿ, ಹೆಣ್ಣು ಭ್ರೂಣವನ್ನು ಹತ್ಯೆ ಮಾಡಲಾಗುತ್ತಿತ್ತು.
ಇದನ್ನು ಓದಿ: ರೈಲು ನಿಲ್ದಾಣದಲ್ಲಿ ತಾಯಿ ಜೊತೆಗಿದ್ದ ಮಗು ಅಪಹರಣ: ಆರೋಪಿ ಪತ್ತೆ
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಭ್ರೂಣ ಹತ್ಯೆಗೆ ಬಳಸುತ್ತಿದ್ದ ಕಿಟ್‌ಗಳು, ಔಷಧಗಳು ಸೇರಿದಂತೆ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವರುಣ ಪೊಲೀಸ್ ಠಾಣೆ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ವೇಳೆ ಇಬ್ಬರು ಗರ್ಭಣಿಯರು ಭ್ರೂಣಲಿಂಗ ಪತ್ತೆಗೆ ಆಗಮಿಸಿದ್ದರು. ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





