ಮೈಸೂರು ನಗರ

ಮೈಸೂರು| ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಹಂತಕರ ಗ್ಯಾಂಗ್‌ ಅರೆಸ್ಟ್‌

ಮೈಸೂರು: ಭ್ರೂಣಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಗ್ರಾಮದ ಸಮೀಪ ಹನುಗನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಐಷಾರಾಮಿ ಬಂಗಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಮಾಡಲಾಗುತ್ತಿತ್ತು.

ಈ ಬಂಗಲೆಗೆ ಗರ್ಭಣಿಯರನ್ನು ಕರೆತಂದು ಅವರ ಭ್ರೂಣಲಿಂಗ ಪತ್ತೆ ಮಾಡಿ, ಹೆಣ್ಣು ಭ್ರೂಣವನ್ನು ಹತ್ಯೆ ಮಾಡಲಾಗುತ್ತಿತ್ತು.

ಇದನ್ನು ಓದಿ: ರೈಲು ನಿಲ್ದಾಣದಲ್ಲಿ ತಾಯಿ ಜೊತೆಗಿದ್ದ ಮಗು ಅಪಹರಣ: ಆರೋಪಿ ಪತ್ತೆ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಭ್ರೂಣ ಹತ್ಯೆಗೆ ಬಳಸುತ್ತಿದ್ದ ಕಿಟ್‌ಗಳು, ಔಷಧಗಳು ಸೇರಿದಂತೆ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ವರುಣ ಪೊಲೀಸ್‌ ಠಾಣೆ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ವೇಳೆ ಇಬ್ಬರು ಗರ್ಭಣಿಯರು ಭ್ರೂಣಲಿಂಗ ಪತ್ತೆಗೆ ಆಗಮಿಸಿದ್ದರು. ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago