ಮೈಸೂರು ನಗರ

ಫಿಟ್‌ ಮೈಸೂರು ವಾಕ್‌ಥಾನ್‌ಗೆ ಮೈಸೂರು ಸಜ್ಜು

 ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ

ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ

ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ ನಗರಿ ಮೈಸೂರು ಇದೀಗ ‘ಫಿಟ್ ಮೈಸೂರು’ ಕಾರ್ಯಕ್ರಮದ ಮೂಲಕ ಮತ್ತೊಂದು ಮಹತ್ವದ ಸಾಮಾಜಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ.

ಮೈಸೂರನ್ನು ಸುಸಜ್ಜಿತ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯ, ಜಿಎಸ್‌ಎಸ್ ಸಿಎಸ್‌ಆರ್, ಜಿಮ್ ಅಸೋಸಿಯೇಷನ್ ಮತ್ತು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ‘ನಮ್ಮ ನಡಿಗೆ, ಆರೋಗ್ಯದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ಜ.11ರಂದು ನಡೆಸುತ್ತಿ ರುವ ‘ಫಿಟ್ ಮೈಸೂರು ವಾಕಥಾನ್’ಗೆ ಅರಮನೆಗಳ ನಗರಿ ಸನ್ನದ್ಧವಾಗಿದೆ.

ಆರೋಗ್ಯಕರ ಮೈಸೂರು, ಸ್ವಚ್ಛ ಮೈಸೂರು, ಹಸಿರು ಮೈಸೂರು, ಸುರಕ್ಷಿತ ಮೈಸೂರು ಎಂಬ ಆಲೋಚನೆಯೊಂದಿಗೆ ವಾಕಥಾನ್ ಅನ್ನು ಆಯೋಜಿಲಾಗಿದೆ. ಈ ಮಹತ್ವದ ಕಾರ್ಯಕ್ರಮ ಹಾಗೂ ಅದರ ಹಿಂದಿನ ಉದ್ದೇಶಗಳ ಕುರಿತಂತೆ ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಯೋಗಾತ್ಮ ಶ್ರೀಹರಿ ದ್ವಾರಕನಾಥ್ ಅವರು ತಮ್ಮ ಅನಿಸಿಕೆ ಹಾಗೂ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.’

ಫಿಟ್ ಮೈಸೂರು ಯೋಜನೆ

ಮೈಸೂರು ವಿಶ್ವವಿದ್ಯಾನಿಲಯ, ಜಿಎಸ್‌ಎಸ್ ಸಿಎಸ್‌ಆರ್, ಜಿಮ್ ಅಸೋಸಿಯೇಷನ್ ಮತ್ತು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಜ.೧೧ರಂದು ಬೆಳಿಗ್ಗೆ ೫.೩೦ಕ್ಕೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಿಂದ ಫಿಟ್ ಮೈಸೂರು ವಾಕಥಾನ್ ಆರಂಭಗೊಳ್ಳಲಿದೆ. ಬಳಿಕ ೫ ಕಿ.ಮೀ. ವ್ಯಾಪ್ತಿಯ ವಾಕಥಾನ್ ಕುಕ್ಕರಹಳ್ಳಿ ಕೆರೆ ವ್ಯಾಪ್ತಿಯಲ್ಲಿ ಸಂಚರಿಸಿ, ಮತ್ತೆ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಮುಕ್ತಾಯಗೊಳ್ಳಲಿದೆ. ಈ ವೇಳೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ವಂದೇ ಮಾತರಂ ಗಾಯನ ನಡೆಯಲಿದೆ.

ವಾಕಥಾನ್ ಆರಂಭಕ್ಕೂ ಮುನ್ನ ಝುಂಬಾ ನೃತ್ಯ ನಡೆಸಲಾಗುತ್ತದೆ. ವಾಕಥಾನ್ ಯಶಸ್ಸಿಗಾಗಿ ಗ್ರಾವಿಟಿ ಒನ್, ಕರ್ನಾಟಕ ಬ್ಯಾಂಕ್, ನಾರಾಯಣ ಹೃದಯಾಲಯ, ಎಂಡಿಜೆಎ, ಡಿಆರ್‌ಸಿ ಹಾಗೂ ಟ್ರಿಪ್ ದಾರ್ ಸೇರಿದಂತೆ ಶಾಲಾ-ಕಾಲೇಜುಗಳು, ಹಾಸ್ಟೆಲ್‌ಗಳು, ಎನ್‌ಎಸ್‌ಎಸ್, ಎನ್‌ಜಿಒಗಳು, ವಿವಿಧ ವ್ಯಾಪಾರಿ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರು ಬೆಂಬಲ ನೀಡಿವೆ. ಆರಂಭಿಕ ದಿನಗಳಲ್ಲಿ ೪೦-೫೦ ಜನರಿಂದ ನಡೆಸುತ್ತಿದ್ದ ಫಿಟ್ ಮೈಸೂರು ವಾಕಥಾನ್‌ಗೆ ಇದೀಗ ಸಾವಿರಾರು ಜನರು ಭಾಗವಹಿಸುತ್ತಿದ್ದು, ಜ.೧೧ರಂದು ನಡೆಯುವ ಬೃಹತ್ ವಾಕಥಾನ್‌ನಲ್ಲಿ ಅಂದಾಜು ೭ರಿಂದ ೮ ಸಾವಿರಕ್ಕೂ ಜನರು ಸೇರುವ ನಿರೀಕ್ಷೆ ಇದೆ ಎಂದು ಶ್ರೀಹರಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

4 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

5 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

7 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

11 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

11 hours ago