ಮೈಸೂರು ನಗರ

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ.

ನಗರದ ಜನತಾನಗರದ ಖಾಸಗಿ ಅಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿಯಾಗಿದ್ದಾರೆ. ಲಕ್ಷ್ಮಿ(14) ಮೃತಪಟ್ಟ ಬಾಲಕಿ.

ಜನತಾ ನಗರದಲ್ಲಿ ವಾಸವಾಗಿರುವ ಬಾಲಕಿ ಲಕ್ಷ್ಮೀ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ಹೋದ ತಕ್ಷಣ ಎಕ್ಸ್‌ರೇ, ಸ್ಕ್ಯಾನಿಂಗ್‌ ಏನು ಮಾಡದೆ ಏಕಾಏಕಿ ಆಪರೇಷನ್‌ ಮಾಡಿದ್ದಾರೆ. ಬಳಿಕ ಅಧಿಕ ಪ್ರಮಾಣದಲ್ಲಿ ಅನಾಸ್ತೇಶಿಯ ನೀಡಿದ ಪರಿಣಾಮ ಇಂದು(ಡಿಸೆಂಬರ್‌.22) ಯುವತಿ ಸಾವನ್ನಪ್ಪಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಬಾಲಕಿಯ ದುರ್ಮರಣಕ್ಕೆ ಶಸ್ತ್ರ ಚಿಕಿತ್ಸೆ ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯರೇ ಕಾರಣ. ಅವರ ನಿರ್ಲಕ್ಷ್ಯದಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಪೋಷಕರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಯುವತಿ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಆಸ್ಪತ್ರೆಯ ಮುಂಭಾಗದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಸ್ವತಿಪುರಂ ಠಾಣಾಯಲ್ಲಿ ದೂರು ದಾಖಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

49 mins ago

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

1 hour ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

2 hours ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

2 hours ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

3 hours ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

3 hours ago