ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್ ಈಗ ಜೈಲು ಸೇರಿದ್ದಾನೆ.
ಪೊಲೀಸರ ಗುಂಡೇಟಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಕಾರ್ತಿಕ್ ಸಂಪೂರ್ಣ ಗುಣಮುಖನಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ಅಕ್ಟೋಬರ್.9ರಂದು 9 ವರ್ಷದ ಬಾಲಕಿ ಮೇಲೆ ಆರೋಪಿ ಕಾರ್ತಿಕ್ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆರೋಪಿ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದರು. ಗುಂಡೇಟಿನಿಂದ ಗಾಯಗೊಂಡಿದ್ದ ಕಾರ್ತಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಈಗ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.





