ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದ ಅತಿಥಿ ಉಪನ್ಯಾಸಕರನ್ನು ಪೊಲೀಸರು ತಡೆದರು.
ನೂರಾರು ಸಂಖ್ಯೆಯಲ್ಲಿ ಆಗಮಿಸಬೇಕಿದ್ದ ಅತಿಥಿ ಉಪನ್ಯಾಸಕರು, ಪೊಲೀಸರ ಬಂದೋಬಸ್ತ್‌ನಿಂದ ಸ್ಥಳಕ್ಕಾಗಮಿಸದೇ ಉಳಿದಿದ್ದಾರೆ.
ಪ್ರತಿಭಟನಾ ಜಾಥಾಗೆ ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಅತಿಥಿ ಉಪನ್ಯಾಸಕರು, ಪೊಲೀಸರು ಹಾಗೂ ಮೈಸೂರು ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಾವು ಆಯ್ಕೆ ಮಾಡಿರುವ ಸಿಎಂರನ್ನು ನಾವೇ ಭೇಟಿಯಾಗಲು ಬಿಡುತ್ತಿಲ್ಲ. ವೋಟ್ ಕೇಳಲು ಬರುವಾಗ ಒಬ್ಬರೇ ಬರುತ್ತಾರೆ. ಆಗ ಯಾವುದೇ ಪ್ರೊಟೋಕಾಲ್ ಇರುವುದಿಲ್ಲ. ನಮ್ಮ ಸಮಸ್ಯೆ ಹೇಳಿಕೊಳ್ಳಲು ನೂರಾರು ಜನ ಬರುತ್ತಾರೆ, ಅವರಿಗಿಲ್ಲ ಅಡೆತಡೆ ನಮಗ್ಯಾಕೆ? ಸುಮಾರು 20 ವರ್ಷಗಳಿಂದಲೂ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ.
ದಿಢೀರನೇ ಇದೀಗ ಹೊಸ ನಿಯಮ ಜಾರಿಗೆ ಬಂದರೆ ಅತಿಥಿ ಉಪನ್ಯಾಸಕರ ಜೀವನಕ್ಕೆ ಮರಣ ಶಾಸನವಾಗುತ್ತದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುತ್ತಾರೆ. ಈ ಪೈಕಿ ನೊಂದವರ ಕುಟುಂಬ ಜೀವ ಕಳೆದುಕೊಂಡರೆ ಯಾರು ಹೊಣೆ? ಸಿಎಂ ಬಳಿ ನಮ್ಮ ಮನವಿ ಸಲ್ಲಿಸಲು ಪೊಲೀಸರು ಅವಕಾಶ ಕೊಡಿ.
ಇಲ್ಲವಾದಲ್ಲಿ ಮುಂದಿನ ದಿನ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…