ಮೈಸೂರು ನಗರ

ಮೈಸೂರು | ನಾಳೆ ಇಂದ ಅತಿಥಿ ಉಪನ್ಯಾಸಕರ ಪ್ರತಿಭಟನೆ : ನಿಯಮಬಾಹಿರ ಕೌನ್ಸಲಿಂಗ್‌ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ಮೈಸೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೨೫-೨೦೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಿಯಮಬಾಹಿರ ಆಯ್ಕೆಯ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಬುಧವಾರದಿಂದ (ಡಿ.೩)ನಿತ್ಯ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ರವರೆಗೆ ಹುಣಸೂರು ರಸ್ತೆಯ ಕಾಲೇಜು ಶಿಕ್ಷಣ ಇಲಾಖೆ ಕಚೇರಿ ಎದುರು ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ತಿಳಿಸಿದೆ.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನೂತನ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೌನ್ಸಿಲಿಂಗ್ ನಡೆಸುವ ವೇಳೆ ಈ ಹಿಂದೆ ಸೇವೆ ಸಲ್ಲಿಸಿದ್ದ ಅತಿಥಿ ಉಪನ್ಯಾಸಕರನ್ನು ಯುಜಿಸಿ ಅರ್ಹತೆ ಪಡೆದಿಲ್ಲವೆಂದು ಪರಿಗಣಿಸಿ ಅವರನ್ನು ಕೈ ಬಿಡಲಾಗಿದೆ ಎಂದು ರಾಜ್ಯ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಹನುಂತೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಇದನ್ನೂ ಓದಿ:-ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಜ್ಯದ ೪೪೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೧೦, ೧೫, ೨೦ ವರ್ಷಗಳಿಂದ ಸುಮಾರು ೧೦,೯೭೨ ಅತಿಥಿ ಉಪನ್ಯಾಸಕರು ಅತ್ಯಂತ ಕನಿಷ್ಠ ಗೌರವಧನ ಪಡೆದು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಪ್ರಸಕ್ತ ಸಾಲಿನಲ್ಲಿ ಯುಜಿಸಿ ಅರ್ಹತೆ ಪಡೆದಿಲ್ಲವೆಂಬ ಕಾರಣಕ್ಕಾಗಿ ೬,೯೦೪ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಲು, ಹೊಸದಾಗಿ ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಇದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ಸೇವೆ ಸಲ್ಲಿಸಿದವರ ವಯೋಮಿತಿ ಮೀರಿದೆ. ಇವರು ಕೆಲಸ ಕಳೆದುಕೊಂಡರೆ ಅವರ ಜೀವನ ಅತಂತ್ರವಾಗುತ್ತದೆ. ಇವರನ್ನೇ ಅವಲಂಬಿಸಿರುವ ಕುಟುಂಬ ನಿರ್ವಹಣೆ ಸಾಧ್ಯವಾಗದಂತಾಗುತ್ತದೆ. ಹೀಗಾಗಿ ಕಾಲೇಜು ಶಿಕ್ಷಣ ಇಲಾಖೆ ತಾನು ಕೈಗೊಂಡಿರುವ ನಿಯಮ ಬಾಹಿರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಕೈಬಿಡಬೇಕು. ನಿಯಮ ಮಾರ್ಪಾಡು ಮಾಡಿ, ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ, ರಾಜ್ಯದಾದ್ಯಂತ ನಡೆಯುತ್ತಿರುವಂತೆ ಪ್ರತಿಭಟನೆ ಇಲ್ಲಿಯೂ ನಡೆಯಲಿದೆ ಎಂದು ತಿಳಿಸಿದರು.

ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಡಾ.ಜಿ. ಮಹೇಶ್, ಅತಿಥಿ ಉಪನ್ಯಾಸಕರಾದ ಆಶಾ, ಶಿವೇಗೌಡ ಸುದ್ದಿಗೋಷ್ಠಿಯಲ್ಲಿ ಇದ್ದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago