ಮೈಸೂರು ನಗರ

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು, ಡಿ.31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘಸಂಸ್ಥೆಗಳು ಮತ್ತು ವಿಶೇಷ ಕೂಟಗಳು ಮಧ್ಯರಾತ್ರಿ 1 ಗಂಟೆಯೊಳಗೆ ಮುಕ್ತಾಯವಾಗಬೇಕು. ಹೋಟೆಲ್ ಹಾಗೂ ಸಂಸ್ಥೆಯ ಒಳಾವರಣದಲ್ಲಿ ಮಾತ್ರ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು 4 ಡಿಸಿಪಿ, 8 ಎಸಿಪಿ, 34 ಪಿಐ, 69 ಪಿಎಸ್‌ಐ, 138 ಎಎಸ್‌ಐ, 1062 ಕಾನ್ಸ್‌ಟೆಬಲ್, 155 ಮಂದಿ ಮಹಿಳಾ ಸಿಬ್ಬಂದಿ, ಸಿಎಆರ್‌ನ 10 ತುಕಡಿ, ಕೆಎಸ್‌ಆರ್‌ಪಿ 5 ತುಕಡಿ, 2 ಕಮಾಂಡೋ ಪಡೆ, ಶ್ವಾನದಳ, ಅಶ್ವಾರೋಹಿ ಪಡೆಗಳು ಬಂದೋಬಸ್ತ್‌ನಲ್ಲಿ ಭಾಗಿಯಾಗಲಿವೆ ಎಂದು ಕಮಿಷನರ್‌ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ರೆಸ್ಟೋರೆಂಟ್ ಮತ್ತು ಮಧ್ಯ ಸರಬರಾಜು ಮಾಡುವ ಬಾರ್ ಹಾಗೂ ಹೋಟೆಲ್‌ಗಳಲ್ಲಿ ಸರ್ಕಾರವು ನಿಗಧಿಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯದಲ್ಲಿ ನೂತನ ವರ್ಷಾಚರಣೆಯ ಸಂಬಂಧ ಕಾರ್ಯಕ್ರಮ ಹಾಗೂ ವಹಿವಾಟು ನಡೆಸಬೇಕಾದಲ್ಲಿ ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಹೆಚ್ಚಿನ ಅವಧಿಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಮತ್ತು ಅನುಮತಿ ಪಡೆದ ಪತ್ರದ ಪ್ರತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು ಎಂದಿದ್ದಾರೆ.

ಇತರೆ ಸೂಚನೆ ಇಂತಿವೆ…
ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ಡಿ.31ರ ರಾತ್ರಿ ಹೊಸ ವರ್ಷ ಅಚರಣೆ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಕಾನೂನು ಉಲ್ಲಂಘಿಸಿ ಅಸಭ್ಯವಾಗಿ ವರ್ತಿಸುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಡಿ.31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲೀಕರು ಮತ್ತು ವ್ಯವಸ್ಥಾಪಕರು ನೂತನ ವರ್ಷಾಚರಣೆ ಆಚರಿಸಲು ಮತ್ತು ಧ್ವನಿವರ್ಧಕ ಅಳವಡಿಸಲು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದಿರಬೇಕು. ಪೂರ್ವಾನುಮತಿ ಪಡೆಯದೆ ನೂತನ ವರ್ಷಾಚರಣೆ ಆಚರಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಹೊಸ ವರ್ಷ ಆಚರಣೆಯ ನೆಪದಲ್ಲಿ ಆಶ್ಲೀಲ, ಅರೆಬೆತ್ತಲೆ ಅಥವಾ ಬೆತ್ತಲೆ ನೃತ್ಯ ಜೂಜಾಟ ನಡೆಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಆಚರಣೆ ನೆಪದಲ್ಲಿ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ವಿಶೇಷವಾಗಿ ಮಹಿಳೆಯರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಚೆಗೆ ವಿರುದ್ದವಾಗಿ ಶುಭ ಕೋರುವ ನೆಪದಲ್ಲಿ ಕಿರಿಕಿರಿಮಾಡಬಾರದು.

ರಸ್ತೆ ಮಧ್ಯಬಾಗದಲ್ಲಿ ಅಥವ ಸಾರ್ವಜನಿಕ ಸ್ಥಳಗಳಲ್ಲಿ ವೀಲಿಂಗ್ ಮತ್ತು ಡ್ರಾಗ್ ರೇಸ್ ಮಾಡುವುದನ್ನು ಹಾಗೂ ಕರ್ಕಶ ಶಬ್ಧ ಮಾಡುವುದನ್ನು ತಡೆಗಟ್ಟಲು ಹಾಗೂ ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ 36 ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಕಾರ್ಯಪಡೆಯು ನಗರದ ಎಲ್ಲಾ ಪ್ರದೇಶಗಳಲ್ಲಿ ಸಂಚರಿಸಿ ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ಮಾದಕ ವಸ್ತು ಮಾರಾಟ ರೌಡಿ ಚಟುವಟಿಕೆಗಳನ್ನು ಗಮನಿಸಲು ವಿಶೇಷ ತಂಡ ರಚಿಸಲಾಗಿದೆ.

ಯಾವುದೇ ಕಾರಣಕ್ಕೂ ಸಾರ್ವಜನಿಕರ ಮನೆಗಳ ಮುಂದೆ, ವಿದ್ಯಾರ್ಥಿಗಳ ಹಾಸ್ಟೆಲ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಕಾಂಪೌಂಡ್‌ನೊಳಗಡೆ ಶುಭಾಶಯ ಕೋರುವ ನೆಪದಲ್ಲಿ ಅನಧಿಕೃತವಾಗಿ ಯಾವುದೇ ವ್ಯಕ್ತಿ ಅಥವಾ ಗುಂಪು ಹೋಗಿ ಕಿರಿಕಿರಿ, ಅಸಭ್ಯವಾಗಿ ವರ್ತನೆ ಮಾಡುವುದನ್ನು ಮತ್ತು ಬಲವಂತವಾಗಿ ಶುಭಾಷಯ ಕೋರುವುದನ್ನು ನಿಷೇಧಿಸಲಾಗಿದೆ. ರಸ್ತೆಯಲ್ಲಿ ಮಧ್ಯಪಾನ ಮಾಡುವುದು ಮತ್ತು ಬಾಟಲನ್ನು ತೂರುವುದನ್ನು ನಿಷೇಧಿಸಿದೆ.

7 ಗಂಟೆ ನಂತರ ಬೆಟ್ಟಕ್ಕಿಲ್ಲ ಪ್ರವೇಶ

ಡಿ.31ರ ರಾತ್ರಿ 7 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಪ್ರವೆಶವನ್ನು ನಿರ್ಭಂದಿಸಲಾಗಿದೆ. ಬೆಟ್ಟದ ಆವರಣಕ್ಕೆ ಊಟ, ಮದ್ಯದ ಬಾಟಲಿ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ದೇವಾಕಯಕ್ಕೆ ಭೇಟಿ ನೀಡಲು ಬೆಟ್ಟಕ್ಕೆ ಹೋದವರು ರಾತ್ರಿ 9 ಗಂಟೆ ಒಳಗಾಗಿ ತಾವರೆಕಟ್ಟೆ ದ್ವಾರದ ಮೂಲಕ ವಾಪಸ್ ಬರುವಂತೆ ಸೂಚನೆ ನೀಡಲಾಗಿದೆ. ಇದು ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯವಾಗುವುದಿಲ್ಲ.

ಸಂಪರ್ಕಿಸಿ: ಹೊಸ ವರ್ಷಾಚರಣೆ ಸಂಬಂದಿ ಯಾರಿಗಾದರೂ ಇತರರಿಂದ ತೊಂದರೆಯಾದಲ್ಲಿ ಕೂಡಲೇ ಪೊಲೀಸ ಕಂಟ್ರೋಲ ರೂಂ ಸಂಖ್ಯೆ 0821-2418339, 2418139 ಅಥವಾ 112 ಗೆ ಕರೆ ಮಾಡಿ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

4 mins ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

16 mins ago

ಹೊಸ ವರ್ಷದ ಸಂಭ್ರಮ: ದೇಗುಲಗಳತ್ತ ಭಕ್ತರ ದಂಡು

ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…

35 mins ago

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

4 hours ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

4 hours ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

4 hours ago