ಮೈಸೂರು ನಗರ

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಜೀವ ರಕ್ಷಣೆಯ ಹಿತದೃಷ್ಟಿಯಿಂದ ಇನ್ನು ಮುಂದೆ ಹೀಲಿಯಂ ಅನಿಲ ಬಳಸಿ ಬಲೂನ್‌ಗೆ ತುಂಬುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದಾರೆ.

ಮೈಸೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸಮಾರಂಭಗಳು ಮುಂತಾದವುಗಳು ನಡೆಯುವ ಸ್ಥಳಗಳಲ್ಲಿ ಹೀಲಿಯಂ ಅನಿಲವನ್ನು ಬಳಸಿ ಬಲೂನ್‌ಗಳು ತುಂಬುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಹೀಲಿಯಂ ಅನಿಲವನ್ನು ನಿರ್ದಿಷ್ಟಗೊಂಡ ಪ್ರಮಾಣಿತ ಸುರಕ್ಷತಾ ವಿಧಾನಗಳನ್ನು ಅನುಸರಿಸದಿರುವುದು, ಇತರೆ ಸಾರ್ವಜನಿಕರು ಇದನ್ನು ಸಂಗ್ರಹಿಸುವುದು ಮತ್ತು ಬಳಕೆ ಹಾಗೂ ಸಾಗಣೆ ಮಾಡುವುದು ಹಾಗೂ ಮಾರಾಟ ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಹೀಲಿಯಂ ಅನಿಲವನ್ನು ಬಳಸಿ ಬಲೂನ್‌ಗಳನ್ನು ತುಂಬುವ ಸಂದರ್ಭದಲ್ಲಿ ಸಂಭವಿಸುವ ದುಷ್ಪಪರಿಣಾಮಗಳಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಗಂಭೀರ ಅಪಾಯ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೀಮಾ ಲಾಟ್ಕರ್ ತಿಳಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

6 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

8 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

8 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

8 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

8 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

10 hours ago