ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಜೀವ ರಕ್ಷಣೆಯ ಹಿತದೃಷ್ಟಿಯಿಂದ ಇನ್ನು ಮುಂದೆ ಹೀಲಿಯಂ ಅನಿಲ ಬಳಸಿ ಬಲೂನ್‌ಗೆ ತುಂಬುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಮೈಸೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸಮಾರಂಭಗಳು ಮುಂತಾದವುಗಳು ನಡೆಯುವ ಸ್ಥಳಗಳಲ್ಲಿ ಹೀಲಿಯಂ ಅನಿಲವನ್ನು ಬಳಸಿ ಬಲೂನ್‌ಗಳು ತುಂಬುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಹೀಲಿಯಂ ಅನಿಲವನ್ನು ನಿರ್ದಿಷ್ಟಗೊಂಡ ಪ್ರಮಾಣಿತ ಸುರಕ್ಷತಾ ವಿಧಾನಗಳನ್ನು ಅನುಸರಿಸದಿರುವುದು, ಇತರೆ ಸಾರ್ವಜನಿಕರು ಇದನ್ನು ಸಂಗ್ರಹಿಸುವುದು ಮತ್ತು ಬಳಕೆ ಹಾಗೂ ಸಾಗಣೆ ಮಾಡುವುದು ಹಾಗೂ ಮಾರಾಟ ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಹೀಲಿಯಂ ಅನಿಲವನ್ನು ಬಳಸಿ ಬಲೂನ್‌ಗಳನ್ನು ತುಂಬುವ ಸಂದರ್ಭದಲ್ಲಿ ಸಂಭವಿಸುವ ದುಷ್ಪಪರಿಣಾಮಗಳಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಗಂಭೀರ ಅಪಾಯ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೀಮಾ ಲಾಟ್ಕರ್ ತಿಳಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…