ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡವಾದ ಯುವರಾಜ ಕಾಲೇಜಿಗೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮೈಸೂರಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಅನೇಕ ಇತಿಹಾಸಗಳಿದ್ದು, ಮಹಾರಾಜರ ಕೊಡುಗೆ ಕೂಡ ಅದರಲ್ಲಿ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಯುವರಾಜ ಕಾಲೇಜಿಗೆ ಭೇಟಿ ನೀಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಯುವರಾಜ ಕಾಲೇಜು ಸುತ್ತಾ ಕಾಲ್ನಡಿಗೆಯಲ್ಲೇ ತೆರಳಿ ವೀಕ್ಷಣೆ ಮಾಡಿದರು.
ಈ ವೇಳೆ ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರೋ.ರಂಗರಾಜು ಅವರು ಯುವರಾಜ ಕಾಲೇಜು ಕಟ್ಟಡದ ಇತಿಹಾಸ ಮತ್ತು ಪರಂಪರೆಯನ್ನು ವಿವರಿಸಿದರು.
ಮೈಸೂರಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಅನೇಕ ಇತಿಹಾಸಗಳಿದ್ದು, ಮಹಾರಾಜರ ಕೊಡುಗೆ ಕೂಡ ಅದರಲ್ಲಿ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರಾಜ ಮನೆತನದವರೇ ಆದ ಕಾರಣ ಪಾರಂಪರಿಕ ಕಟ್ಟಡವನ್ನು ಉಳಿಸಲು ಪಣ ತೊಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಮೈಸೂರಿನ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡು, ಅವುಗಳ ಉಳಿವಿಗೆ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ.